ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್​ಪೆಕ್ಟರ್ ಅಮಾನತು: ಗೃಹ ಸಚಿವ ಪರಮೇಶ್ವರ್

0
25

Updated By: Priyalachhi

ಬೆಂಗಳೂರು: ಅಪರಾಧ ಪ್ರಕರಣವೊಂದರಲ್ಲಿ ಸಹಾಯ ಮಾಡಲು 4 ಲಕ್ಷ ರೂ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕೆ.ಪಿ.ಅಗ್ರಹಾರ ಠಾಣೆ ಇನ್ಸ್​ಪೆಕ್ಟರ್ ಗೋವಿಂದರಾಜು ಅವರನ್ನು ಅಮಾನತು ಮಾಡಲಾಗಿದೆ.

ಲಂಚ ಪಡೆದ ಆರೋಪದಡಿ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಗೋವಿಂದರಾಜು ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಗುರುವಾರ ಮೈಸೂರು ರಸ್ತೆಯ ಸಿಎಎಆರ್ ಮೈದಾನ ಬಳಿ ಪೊಲೀಸ್ ಸಮವಸ್ತ್ರದಲ್ಲಿಯೇ ಲಂಚ ಪಡೆಯುತ್ತಿದ್ದಾಗ ಇನ್ಸ್​ಪೆಕ್ಟರ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಟ್ರ್ಯಾಪ್​ಗೆ ಒಳಗಾಗುತ್ತಿದ್ದಂತೆ ಗೋವಿಂದರಾಜು ಜೋರಾಗಿ ಚೀರಾಡಿದ್ದರು. ಬಳಿಕ ಸಿನಿಮೀಯ ಶೈಲಿಯಲ್ಲಿ ಅವರನ್ನು ಬಂಧಿಸಲಾಗಿತ್ತು. ಬಳಿಕ ಲೋಕಾಯುಕ್ತ ದಾಳಿ ವೇಳೆ ಗೋವಿಂದರಾಜು ಚೀರಾಡಿದ್ದ ವಿಡಿಯೋ ವೈರಲ್ ಆಗಿತ್ತು.

ಈ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ.ಪರಮೇಶ್ವರ್, ಲಂಚ ಪಡೆದ ಆರೋಪ ಸಂಬಂಧ ಇನ್ಸ್​ಪೆಕ್ಟರ್​ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಕೆಲ ದಿನಗಳ ಹಿಂದೆ ವಾರ್ಷಿಕ ಪೊಲೀಸ್ ಸಮ್ಮೇಳನದಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಕೂಡದು ಎಂದು ಎಚ್ಚರಿಸಲಾಗಿತ್ತು. ಪದೇ ಪದೇ ಇಂತಹ ಘಟನೆಯಾದಾಗ ಸರ್ಕಾರಕ್ಕೆ ಹಾಗೂ ವೈಯುಕ್ತಿಕವಾಗಿ ನನಗೂ ಮುಜುಗರವಾಗಲಿದೆ. ಆಗಾಗ ಇಂತಹ ಘಟನೆಗಳು ಯಾಕೆ ನಡೆಯುತ್ತದೆ ಎಂಬುದರ ಬಗ್ಗೆ ಅಧ್ಯಯನ ಮಾಡಬೇಕಿದೆ ಎಂದರು.
sambrama prabha editor suresh kt

LEAVE A REPLY

Please enter your comment!
Please enter your name here