ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ
ಬೆಂಗಳೂರು: ಕುರ್ಚಿ ಆಸೆಗಾಗಿ ತಮ್ಮ ವಿರೋಧಿ ಬಣದ ನಾಯಕರನ್ನು ಹೊಂಚುಹಾಕಿ, ಸಂಚು ರೂಪಿಸಿ ಒಬ್ಬೊಬ್ಬರನ್ನೇ ಮುಗಿಸುತ್ತಿದ್ದಾರೆಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಜೆಡಿಎಸ್ ಕಿಡಿಕಾರಿದೆ.
ಮುಸ್ಲಿಂ ನಾಯಕರನ್ನು ಅಮಾನತುಗೊಳಿಸಿರುವ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪೋಸ್ಟ್ ಮಾಡಿದ್ದು, ತೀವ್ರವಾಗಿ ಕಿಡಿಕಾರಿದೆ.
ಕಾಂಗ್ರೆಸ್ ಪಕ್ಷದಲ್ಲಿ ಸಾಮಾಜಿಕ ಅನ್ಯಾಯ ನಡೆಯುತ್ತಿದೆ. ಅಂದು ಪರಿಶಿಷ್ಟ ಸಮುದಾಯದ ವಾಲ್ಮೀಕಿ ಜನಾಂಗದ ನಾಯಕ ಕೆ.ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಏಕಾಏಕಿ ಕಿತ್ತು ಹಾಕಲಾಯಿತು. ಇಂದು ಅಲ್ಪಸಂಖ್ಯಾತ ಸಮುದಾಯದ ಮುಖಂಡ ಅಬ್ದುಲ್ ಜಬ್ಬರ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.
ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ವಿಚಾರದಲ್ಲಿ ಎಲ್ಲವೂ ಸರಿಯಲ್ಲ. ಕುರ್ಚಿ ಆಸೆಗಾಗಿ ಡಿಕೆ.ಶಿವಕುಮಾರ್ ತಮ್ಮ ವಿರೋಧಿ ಬಣದ ನಾಯಕರನ್ನು ಹೊಂಚುಹಾಕಿ, ಸಂಚು ರೂಪಿಸಿ ಒಬ್ಬೊಬ್ಬರನ್ನೇ ಮುಗಿಸುತ್ತಿದ್ದಾರೆಂದು ಆರೋಪಿಸಿದೆ.



