ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹ: ಅಂಗನವಾಡಿ ಕಾರ್ಯಕರ್ತೆಯರು

0
42

Updated By: Priyalachhi

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಲಕ್ಷಾಂತರ ಅಂಗನವಾಡಿ ಸಹಾಯಕಿಯರು ಮತ್ತು ಕಾರ್ಯಕರ್ತೆಯರು ಸೋಮವಾರದಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.

ನಗರದ ಸ್ವಾತಂತ್ರ್ಯ ಉದ್ಯಾನ ಸೇರಿದಂತೆ ಮಂಡ್ಯ ಮತ್ತು ಹುಬ್ಬಳ್ಳಿಯಲ್ಲಿ ಕೇಂದ್ಹರ ಸರ್ಕಾರದ ಸಚಿವರ ನಿವಾಸಗಳ ಎದುರು ಪ್ರತಿಭಟಿಸುವುದರೊಂದಿಗೆ ರಾಜ್ಯದ್ಯಂತ ಹೋರಾಟ ಆರಂಭಿಸಿದ್ದಾರೆ. ತುಮಕೂರಿನಲ್ಲೂ ಅಹೋರಾತ್ರಿ ಧರಣಿ ನಡೆಸಿದ್ದಾರೆ.

ಅಂಗನವಾಡಿ ಘಟಕ ವೆಚ್ಚ ಹೆಚ್ಚಳ ಮಾಡಿ, ಸ್ಥಳೀಯ ಆಹಾರ ಪದಾರ್ಥಗಳನ್ನು ನೀಡಬೇಕು. ಆದರೆ, 2018ರಿಂದ ಅಂಗನವಾಡಿ ನೌಕರರಿಗೆ ಕೇಂದ್ರ ಸರ್ಕಾರ ವೇತನ ಹೆಚ್ಚಳ ಮಾಡಲಿಲ್ಲ. ಇಂದಿಗೂ ಅಂಗನವಾಡಿ ಕಾರ್ಯಕರ್ತೆಗೆ 2,700 ರೂ. ಸಹಾಯಕಿಯರಿಗೆ 1,350 ರೂ. ಮಾತ್ರ ಕೇಂದ್ರ ಸರ್ಕಾರ ನೀಡುತ್ತಿದೆ. ಕನಿಷ್ಠವೇತನವನ್ನೂ ನೀಡುತ್ತಿಲ್ಲ.

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಭೌತಿಕ ಗುರುತು ವ್ಯವಸ್ಥೆ (ಎಫ್‌ಆರ್‌ಎಸ್) ರದ್ದು ಮಾಡಬೇಕು. ಇಲ್ಲದಿದ್ದರೆ ಎಫ್‌ಆರ್‌ಎಸ್ ಇರುವ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ವೈಫೈ ವ್ಯವಸ್ಥೆ ಅಳವಡಿಸಬೇಕು. ಅಂಗನವಾಡಿ ನೌಕರರನ್ನು ಚುನಾವಣಾ ಕೆಲಸಗಳಿಗೆ ಬಳಸಬಾರದು. ಅಂಗನವಾಡಿ ನೌಕರರನ್ನು 3 ಮತ್ತು 4ನೇ ದರ್ಜೆ ನೌಕರರನ್ನಾಗಿ ಪರಿಗಣಿಸಬೇಕು ಪ್ರತಿಭಟನಾಕಾರರು ಒತ್ತಾಯಿಸಿದರು.

ರಾಜ್ಯದಲ್ಲಿ ಅಸಂಘಟಿತ ಕಾರ್ಮಿಕರಿಗೆ ಇಎಸ್‌ಐ, ಪಿಎಫ್ ವ್ಯವಸ್ಥೆಯಿದೆ. ನಿಗದಿತ ವೇತನ ನೀಡಲಾಗುತ್ತಿದೆ. ಆದರೆ, ದೇಶಾದ್ಯಂತ 64 ಲಕ್ಷ ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರಿಗೆ ಯಾವುದೇ ಸೌಲಭ್ಯ ನೀಡದಿರುವುದು ಖಂಡನೀಯ. ಅಲ್ಲದೆ, ಹಲವು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಯಕರ್ತೆಯರನ್ನು ಕಾಯಂಗೊಳಿಸದೇ ಶೋಷಣೆ ಮಾಡಲಾಗುತ್ತಿದೆ. ಈ ಎಲ್ಲ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

sambrama prabha editor suresh kt

LEAVE A REPLY

Please enter your comment!
Please enter your name here