ಸ್ಯಾಂಡಲ್ ವುಡ್ ನಲ್ಲಿ ‘ಫ್ಯಾನ್ಸ್’ ವಾರ್!: ವಿಜಯಲಕ್ಷ್ಮಿಗೆ ತಿರುಗೇಟು ಕೊಟ್ಟ ಕಿಚ್ಚನ ಅಭಿಮಾನಿಗಳು

0
27

Updated By: Priyalachhi

ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ‘ಮಾರ್ಕ್’ ಸಿನಿಮಾ ಇದೇ 25 ರಂದು ಬಿಡುಗಡೆಗೆ ಸಜ್ಜಾಗಿರುವಂತೆಯೇ ಇದರ ‘ಪ್ರೀ ರಿಲೀಸ್ ‘ ಕಾರ್ಯಕ್ರಮದಲ್ಲಿ ನೀಡಿದ್ದಾರೆ ಎನ್ನಲಾದ ಹೇಳಿಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಹಾಗೂ ಅವರ ಅಭಿಮಾನಿಗಳ ನಡುವೆ ವಾರ್ ಗೆ ಕಾರಣವಾಗಿದೆ.

ನಾವು ಸಿನಿಮಾ ಬಿಡುಗಡೆ ಮಾಡುವ ಜೊತೆಗೆ ಯುದ್ಧವೊಂದನ್ನು ಸಹ ಮಾಡಬೇಕಿದೆ. ಹೊರಗೆ ಪಡೆಯೊಂದು ಯುದ್ಧಕ್ಕೆ ರೆಡಿ ಆಗುತ್ತಿದೆ. ನಾನು ಮಾತನಾಡಬಾರದು ಎಂದು ಸುಮ್ಮನಿದ್ದೆ, ಮಾತನಾಡಲು ಬರುವುದಿಲ್ಲ ಎಂದರ್ಥವಲ್ಲ, ಆದರೆ ಕೆರಳಿಸುತ್ತಾ ಹೋದರೆ ಸುಮ್ಮನೆ ಕೂರಲು ಆಗುವುದಿಲ್ಲ ಎಂದು ಸುದೀಪ್ ಹೇಳಿದ್ದಾರೆ.

ಇನ್ನೂ ಸುದೀಪ್ ಮಾತಿಗೆ ಟಾಂಗ್ ಕೊಟ್ಟಂತೆ ಮಾತನಾಡಿರುವ ದರ್ಶನ್‌ ಪತ್ನಿ ವಿಜಯಲಕ್ಷ್ಮಿ, ಕೆಲವರು ದರ್ಶನ್‌ ಅವ್ರು ಇಲ್ಲದೇ ಇದ್ದಾಗ ಏನೇನೋ ಮಾತಾಡ್ತಾ ಇದ್ದಾರೆ. ಅವರ ಬಗ್ಗೆ ಅವ್ರ ಫ್ಯಾನ್ಸ್ ಬಗ್ಗೆ ಎಲ್ಲಾ ಮಾತಾಡ್ತಾರೆ. ವೇದಿಕೆ ಮೇಲೆ ನಿತ್ಕೊಂಡು ಮಾತಾಡೋದು. ವೀಡಿಯಾಗಳಲ್ಲಿ ಕುಳಿತು ಮಾತಾಡೋದು. ಹೊರಗೆ ಕುತ್ಕೊಂಡ್ ಮಾತಾಡೋದು ಎಲ್ಲಾ ಮಾಡ್ತಿದ್ದಾರೆ. ಅದೇ ಜನರು ದರ್ಶನ್ ಅವರು ಇದ್ದಾಗ ಬೆಂಗಳೂರಲ್ಲಿ ಇರ್ತಾರಾ ಇಲ್ವಾ ಅಂತಾನೇ ಗೊತ್ತಾಗಲ್ಲ ಅಂತ ಹೇಳಿದ್ದರು.

sambrama prabha editor suresh kt

LEAVE A REPLY

Please enter your comment!
Please enter your name here