ಇಂದು ರಾಕಿಂಗ್ ಸ್ಟಾರ್ ಯಶ್​ ಅವರ ಹುಟ್ಟುಹಬ್ಬ: ಅಭಿಮಾನಿಗಳಿಗೆ ಕೊಟ್ಟ ಸಂದೇಶ ಏನು?

0
17

Updated By: Priyalachhi 

ರಾಕಿಂಗ್ ಸ್ಟಾರ್ ಯಶ್ ಸದ್ಯ ಕನ್ನಡ ಚಿತ್ರರಂಗ ಅಲ್ಲದೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ನಟ. ಸದ್ಯ ಟಾಕ್ಸಿಕ್ ಸಿನಿಮಾದ ಜಪ ಮಾಡುತ್ತಿರುವ ಯಶ್ ಬರ್ತ್ ಡೇ ಇಂದು. ಈ ವಿಶೇಷ ದಿನ ಅಭಿಮಾನಿಗಳಿಗೆ ರಾಮಾಚಾರಿ ಒಂದು ಸಂದೇಶ ನೀಡಿದ್ದಾರೆ. ಈ ಸಲವೂ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ ಆಚರಿಸಿಕೊಳ್ತಿಲ್ಲ.. ಬದಲಾಗಿ ಟಾಕ್ಸಿಕ್ ಸಿನಿಮಾದ ದೊಡ್ಡ ಸಂಭ್ರಮವನ್ನು ಮಾರ್ಚ್ 19 ರಂದು ಜೊತೆಯಾಗಿ ಆಚರಿಸೋಣವೆಂದು ಯಶ್ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

2024ರಂದು ಗದಗ ಜಿಲ್ಲೆಯ ಸುರನಗಿ ಗ್ರಾಮದಲ್ಲಿ ಅಭಿಮಾನಿಗಳು ಬ್ಯಾನರ್ ಕಟ್ಟುವ ಸಂದರ್ಭದಲ್ಲಿ ವಿದ್ಯುತ್ ತಗುಲಿ ಮೂವರು ಅಭಿಮಾನಿಗಳು ಮೃತಪಟ್ಟಿದ್ದರು. ಈ ಘಟನೆಯ ಬಳಿಕ ಅಭಿಮಾನಿಗಳ ಜೊತೆ ಯಶ್ ತಮ್ಮ ಹುಟ್ಟುಹಬ್ಬವನ್ನು ಆಚರಿಕೊಳ್ಳದಿರಲು ನಿರ್ಧರಿಸಿದ್ದು, ಕಳೆದ ವರ್ಷ ಕೂಡ ಯಶ್ ಅಭಿಮಾನಿಗಳಿಗೆ ಸಿಕ್ಕಿರಲಿಲ್ಲ. ಈ ಬಾರಿ ನನ್ನ ಟಾಕ್ಸಿಕ್ ಸಿನಿಮಾದ ಟೀಸರ್ ಅನ್ನು ಸಂಭ್ರಮಿಸೋಣ ಎಂದಿದ್ದಾರೆ.

ಇನ್ನು ಯಶ್‌ ಅವರು ಕೊನೆಯದಾಗಿ ತೆರೆಮೇಲೆ ಕಾಣಿಸಿಕೊಂಡಿದ್ದು 2022ರ ಏಪ್ರಿಲ್‌ನಲ್ಲಿ. ಇದೀಗ ಬಹು ನಿರೀಕ್ಷೆಯ ಟಾಕ್ಸಿಕ್ ಚಿತ್ರ ಇದೇ ಮಾರ್ಚ್​ನಲ್ಲಿ ಬಿಡುಗಡೆ ಆಗಲಿದ್ದು, ಈಗಾಗಲೇ ಈ ಚಿತ್ರದಲ್ಲಿ ಅಭಿನಯಿಸಿರುವ ಪಾತ್ರಗಳ ಪೋಸ್ಟರ್ ಅನ್ನು ಚಿತ್ರತಂಡ ರಿವೀಲ್ ಮಾಡುತ್ತಾ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚು ಮಾಡುತ್ತಿದೆ. ಮತ್ತೊಂದು ಕಡೆ ನಾಲ್ಕು ವರ್ಷಗಳ ನಂತರ ಯಶ್‌ ಅವರು ತೆರೆಮೇಲೆ ಕಾಣಿಸಿಕೊಳ್ಳಲಿದ್ದು ದೊಡ್ಡ ಮಟ್ಟದ ಕ್ರೇಜ್ ಹುಟ್ಟಿಸಿದೆ.

Yash Message

ಇನ್ನು ಜನವರಿ 8ರಂದು ಯಶ್‌ ಹುಟ್ಟುಹಬ್ಬ. ಈ ದಿನ ಟಾಕ್ಸಿಕ್‌ ಸಿನಿಮಾದ ಕಡೆಯಿಂದ ಒಂದು ಬಿಗ್‌ ಅಪ್ಡೇಟ್‌ ಸಿಗಲಿದೆ. ಈ ಹಿಂದೆ ಒಂದು ಟೀಸರ್‌ ರಿಲೀಸ್‌ ಆಗಿತ್ತು. ಈ ಬಾರಿ ಅದಕ್ಕಿಂತಲೂ ಭಿನ್ನವಾದದನ್ನೇನೋ ನೀಡಲು ಚಿತ್ರತಂಡ ಪ್ಲ್ಯಾನ್‌ ಮಾಡಿಕೊಂಡಿದೆ. ಟ್ರೇಲರ್‌ ಅಥವಾ ಮತ್ತೊಂದು ಟೀಸರ್‌ ಅನ್ನು ಚಿತ್ರತಂಡ ರಿಲೀಸ್‌ ಮಾಡುವ ಸಾಧ್ಯತೆ ಇದೆ.

ಈ ಚಿತ್ರವನ್ನು ಗೀತು ಮೋಹನ್‌ದಾಸ್‌ ಅವರು ನಿರ್ದೇಶನ ಮಾಡುತ್ತಿದ್ದಾರೆ ಎಂಬುದನ್ನು ಹೊರತುಪಡಿಸಿ, ಮಿಕ್ಕ ಮಾಹಿತಿಗಳನ್ನು ಚಿತ್ರತಂಡ ಬಹಿರಂಗಪಡಿಸಿರಲಿಲ್ಲ. ಇದೀಗ ಆ ಕುರಿತ ಹೆಚ್ಚಿನ ಮಾಹಿತಿಗಳು ಗೊತ್ತಾಗಿವೆ. ರಾಷ್ಟ್ರೀಯ ಪ್ರಶಸ್ತಿ ವಿಜೇತ ರಾಜೀವ್ ರವಿ ಛಾಯಾಗ್ರಹಣವನ್ನು ಮಾಡಿದರೆ, ಕೆಜಿಎಫ್‌ನಲ್ಲಿ ಯಶ್ ಅವರೊಂದಿಗೆ ಕೆಲಸ ಮಾಡಿದ್ದ ರವಿ ಬಸ್ರೂರು ಸಂಗೀತ ಸಂಯೋಜಿಸುತ್ತಿದ್ದಾರೆ. ಸಲಾರ್‌, ಕೆಜಿಎಫ್‌ ಖ್ಯಾತಿಯ ಉಜ್ವಲ್ ಕುಲಕರ್ಣಿ ಸಂಕಲನ ಮಾಡುತ್ತಿದ್ದಾರೆ. ನಿರ್ಮಾಣ ವಿನ್ಯಾಸದ ಜವಾಬ್ದಾರಿಯನ್ನು ಟಿಪಿ ಅಬಿದ್ ವಹಿಸಿಕೊಂಡಿದ್ದು, ಹಾಲಿವುಡ್ ಸಾಹಸ ನಿರ್ದೇಶಕ ಜೆಜೆ ಪೆರ್ರಿ ಟಾಕ್ಸಿಕ್‌ನ ಮಹತ್ವದ ಸಾಹಸ ಸನ್ನಿವೇಶಗಳನ್ನು ನಿರ್ದೇಶನ ಮಾಡಿದ್ದಾರೆ.

sambrama prabha editor suresh kt

LEAVE A REPLY

Please enter your comment!
Please enter your name here