ಎರಡೂವರೆ ವರ್ಷಗಳಲ್ಲಿ ಮಂಡ್ಯ ಅಭಿವೃದ್ಧಿಗೆ 10 ಸಾವಿರ ಕೋಟಿ ಅನುದಾನ : ಸಚಿವ ಚಲುವರಾಯಸ್ವಾಮಿ

0
44

Updated By: Priyalachhi

ಮಂಡ್ಯ: ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಎರಡೂವರೆ ವರ್ಷಗಳಲ್ಲಿ ಮಂಡ್ಯ ಜಿಲ್ಲೆಗೆ 10 ಸಾವಿರ ಕೋಟಿಗೂ ಹೆಚ್ಚು ಅನುದಾನವನ್ನು ಜಿಲ್ಲೆಯ ಅಭಿವೃದ್ಧಿಗೆ ತರಲಾಗಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಅವರು ಹೇಳಿದರು.

ಮಂಡ್ಯ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿದ್ದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದವರು ಇಂದು ರಾಷ್ಟ್ರಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಆದರೆ ಕರ್ನಾಟಕ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ನೀಡಿದಷ್ಟು ಇನ್ಯಾವುದೇ ರಾಜ್ಯಗಳಲ್ಲಿ ನೀಡಿಲ್ಲ ಎಂದು ಹೇಳಿದರು.

ಪಂಚ ಗ್ಯಾರಂಟಿಗಳ ಮೂಲಕ ಪ್ರತಿ ತಾಲೂಕಿಗೆ ವಾರ್ಷಿಕ 250 ಕೋಟಿ ರೂ. ಅನುದಾನ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲೂ ಸಹ ಗ್ಯಾರಂಟಿ ಯೋಜನೆ ಮುಂದುವರೆಯುತ್ತದೆ. ಮುಂದಿನ ಚುನಾವಣೆಯಲ್ಲೂ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಪಂಚ ಗ್ಯಾರಂಟಿಗಳನ್ನ ಘೋಷಿಸಲಾಗುವುದು ಎಂದು ತಿಳಿಸಿದರು.

ಕೃಷಿ ಇಲಾಖೆ ವತಿಯಿಂದ ಸದರಿ ವರ್ಷದ ಏಪ್ರಿಲ್‌ನಿಂದ ಇಲ್ಲಿಯವರೆಗೂ ಕೊಪ್ಪ ಹೋಬಳಿಯ 520 ಫಲಾನುಭವಿಗಳಿಗೆ 150 ಲಕ್ಷ ರೂ.ಗಳ ಸಹಾಯಧನ ನೀಡಲಾಗಿದೆ. ಒಟ್ಟು ಜಿಲ್ಲೆಯಲ್ಲಿ 49,330 ಫಲಾನುಭವಿಗಳಿಗೆ ಕೃಷಿ ಇಲಾಖೆಯ ವಿವಿಧ ಯೋಜನೆಗಳಿಂದ 2390.80 ಲಕ್ಷ ರೂ.ಗಳ ಸಹಾಯಧನ ನೀಡಲಾಗಿದೆ. ಒಬ್ಬರಿಗೆ ಸುಮಾರು 50 ಲಕ್ಷ ರೂ.ವರೆಗೂ ಸಬ್ಸಿಡಿ ನೀಡಲಾಗಿದೆ ಎಂದರು.

 

sambrama prabha editor suresh kt

LEAVE A REPLY

Please enter your comment!
Please enter your name here