Updated By: Priyalachhi
ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತ(ಕೆಎಸ್‌ಸಿಸಿಎಫ್)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 34 ಹುದ್ದೆಗಳ ನೇಮಕಾತಿ ನಡೆಯಲಿದೆ.
ಹುದ್ದೆಗಳ ವಿವರ:
- ಫಾರ್ಮಸಿಸ್ಟ್ – 7
- ಪ್ರಥಮ ದರ್ಜೆ ಗುಮಾಸ್ತರು – 10
- ವಿಕ್ರಯ ಸಹಾಯಕರು – 16
- ವಿಕ್ರಯ ಸಹಾಯಕರು – 01

ವಿದ್ಯಾರ್ಹತೆ:
- ಫಾರ್ಮಸಿಸ್ಟ್ – ಡಿಪ್ಲೋಮಾ ಇನ್ ಫಾರ್ಮಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
- ಪ್ರಥಮ ದರ್ಜೆ ಗುಮಾಸ್ತರು – ಅಧಿಕೃತ ವಿವಿಯಿಂದ ಪದವಿಯಲ್ಲಿ ತೇರ್ಗಡೆಯಾಗಿರಬೇಕು.
- ವಿಕ್ರಯ ಸಹಾಯಕರು – ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾಗಿರಬೇಕು.
- ಮೇಲಿನ ಎಲ್ಲ ಹುದ್ದೆಗಳಿಗೆ ಕಂಪ್ಯೂಟರ್ ಜ್ಞಾನದೊಂದಿಗೆ ಕನ್ನಡ ಭಾಷಾ ಜ್ಞಾನ ಹೊಂದಿರಬೇಕು.
ಅರ್ಜಿ ಸಲ್ಲಿಕೆ ಹೇಗೆ?: ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕು. ಪ.ಜಾತಿ, ಪ್ರವರ್ಗ ಎ, ಪ.ಜಾತಿ ಪ್ರ.ಬಿ, ಪ.ಜಾತಿ ಪ್ರ.ಸಿ, ಪ.ಪಂ, ಪ್ರ.1 ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 500 ರೂ ಹಾಗೂ ಇತರೆ ಅಭ್ಯರ್ಥಿಗಳಿಗೆ 1,000 ರೂ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಜನವರಿ 9ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಫೆಬ್ರವರಿ 7 ಕಡೇಯ ದಿನ.
ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ virtualofficeerp.com/ksccf2026 ವೆಬ್‌ಸೈಟ್‌ಗೆ ಭೇಟಿ ನೀಡಿ.



