Updated By: Priyalachhi
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಿಗದಿಯಾಗಿದ್ದ ವಿಜಯ್ ಹಜಾರೆ ಟ್ರೋಫಿ ಪಂದ್ಯವನ್ನು ಆಯೋಜಿಸಲು ಅನುಮತಿ ನಿರಾಕರಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಂಗಳವಾರ ತಿಳಿಸಿದ್ದಾರೆ. ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತದ ಹಿನ್ನೆಲೆಯಲ್ಲಿ ಶಿಫಾರಸು ಮಾಡಲಾದ ಸರಿಪಡಿಸುವ ಕ್ರಮಗಳನ್ನು ಜಾರಿಗೆ ತರಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ವಿಫಲವಾಗಿರುವ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರ ಪರಿಣಾಮ ಇಂದು ನಿಗದಿಯಾಗಿದ್ದ ದೆಹಲಿ ಮತ್ತು ಆಂಧ್ರಪ್ರದೇಶ ನಡುವಿನ ವಿಜಯ್ ಹಜಾರೆ ಟ್ರೋಫಿ ಪಂದ್ಯವನ್ನು ಕ್ರೀಡಾಂಗಣದಲ್ಲಿ ನಡೆಯುತ್ತಿಲ್ಲ. ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ದೆಹಲಿ ಪರವಾಗಿ ಪಂದ್ಯವನ್ನು ಆಡಲು ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದಾರೆ.



