ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ – 10 ಸಾವಿರ ಲಂಚ ಪಡೆಯುತ್ತಿದ್ದ FDA ಅರೆಸ್ಟ್!

0
17

Updated By: Priyalachhi

ಕಮಲಾಪುರ ಪಟ್ಟಣದಲ್ಲಿ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದ ಕೆಲಸ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಪ್ರಥಮ ದರ್ಜೆ ಸಹಾಯಕ (FDA) ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ಕಮಲಾಪುರ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಶಿಕಾಂತ್ ಜಂಜಿರ್ ಬಂಧಿತ ಆರೋಪಿ. ಜಮೀನು ವ್ಯಾಜ್ಯದ ವಿಚಾರವಾಗಿ ಕೆಲಸ ಮಾಡಿಕೊಡಲು ಇವರು ಕೇಶು ರಾಠೋಡ್ ಎಂಬುವವರ ಬಳಿ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

ಲಂಚ ನೀಡಲು ಇಚ್ಛಿಸದ ಕೇಶು ರಾಠೋಡ್ ಅವರು ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ ಇಂದು ಕಚೇರಿಯಲ್ಲೇ ಕೇಶು ಅವರಿಂದ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಶಶಿಕಾಂತ್ ಅವರನ್ನು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಲೋಕಾಯುಕ್ತ ಇನ್ಸ್ಪೆಕ್ಟರ್ ಅರುಣ್ ಮುರುಗುಂಡಿ ಅವರ ನೇತೃತ್ವದಲ್ಲಿ ಈ ಯಶಸ್ವಿ ದಾಳಿ ನಡೆದಿದೆ. ಆರೋಪಿ ಶಶಿಕಾಂತ್ ಜಂಜಿರ್ ಅವರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು, ಲಂಚದ ಹಣವನ್ನು ಜಪ್ತಿ ಮಾಡಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

sambrama prabha editor suresh kt

LEAVE A REPLY

Please enter your comment!
Please enter your name here