Updated By: Priyalachhi
ನಟ ರಣವೀರ್ ಸಿಂಗ್ ಅವರು ಇತ್ತೀಚೆಗೆ ವಿವಾದ ಒಂದನ್ನು ಮಾಡಿಕೊಂಡಿದ್ದರು. ದೈವವನ್ನು ಅವರು ದೆವ್ವ ಎಂದು ಕರೆದರು. ಅಷ್ಟೇ ಅಲ್ಲ, ದೈವವನ್ನು ಅನುಕರಿಸಲು ಹೋಗಿ ಹೀಯಾಳಿಸಿದಂತೆ ಕಾಣಿಸಿದೆ. ಈ ವಿಷಯದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಗೋವಾ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಈ ಘಟನೆ ನಡೆಯಿತು. ಅಲ್ಲಿಯೇ ಕುಳಿತಿದ್ದ ರಿಷಬ್ ಶೆಟ್ಟಿಗೂ ಸಾಕಷ್ಟು ಮುಜುಗರ ತಂದಿತ್ತು. ಈಗ ಅಮೇಜಾನ್ ಪ್ರೈಮ್ ವಿಡಿಯೋ ಈ ಬಗ್ಗೆ ಪೋಸ್ಟ್ ಮಾಡಿದೆ. ಈ ಮೂಲಕ ರಣವೀರ್ ಸಿಂಗ್ಗೆ ಕೌಂಟರ್ ಕೊಟ್ಟಿದೆ ಎಂದು ಹೇಳಲಾಗುತ್ತಿದೆ.
ಗೋವಾ ಅಂತಾರಾಷ್ಟ್ರೀಯ ಸಿನಿಮೋತ್ಸವದ ಸಮಾರೋಪ ಸಮಾರಂಭ ನಡೆಯುತ್ತಿತ್ತು. ರಣವೀರ್ ಸಿಂಗ್ ಅವರು ತಮ್ಮ ‘ಧುರಂದರ್’ ಸಿನಿಮಾ ಪ್ರಚಾರ ಮಾಡಲು ಅಲ್ಲಿಗೆ ಬಂದಿದ್ದರು. ರಣವೀರ್ ಸಿಂಗ್ ಅವರು ‘ಕಾಂತಾರ’ ಚಿತ್ರವನ್ನು ಹೊಗಳುವ ಭರದಲ್ಲಿ ಎಡವಟ್ಟು ಮಾಡಿಕೊಂಡರು.



