Updated By: Priyalachhi
ಹಾಸನ: ಹಾಸನದ ವಿದ್ಯಾನಗರದಲ್ಲಿರುವ ನಟ ಯಶ್ ಅವರ ತಾಯಿ ಪುಷ್ಪಾ ಅರುಣ್‌ಕುಮಾರ್ ಹಾಗೂ ಜಿಪಿಎ ಹೋಲ್ಡರ್ ದೇವರಾಜ್ ನಡುವಿನ ಭೂ ಸಂಘರ್ಷ ಮತ್ತೆ ತಾರಕ್ಕಕೇರಿದ್ದು, ಇದೀಗ ಮತ್ತೆ ಭಾರಿ ಸದ್ದು ಮಾಡುತ್ತಿದೆ.
ಹೌದು.. ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಸೈಟ್ ಒತ್ತುವರಿ ಮಾಡಿದ್ದಾರೆ ಎನ್ನುವ ಆರೋಪ ಕುರಿತ ಪ್ರಕರಣ ಮತ್ತೆ ಸದ್ದು ಮಾಡುತ್ತಿದ್ದು, ನಿರ್ಮಾಪಕಿಯೂ ಆಗಿರುವ ಯಶ್ ಅವರ ತಾಯಿ ಪುಷ್ಪ ಅರುಣ್ ಕುಮಾರ್, ವಿವಾದಿತ ಜಾಗದಲ್ಲಿ ಮತ್ತೆ ಕಂಪೌಂಡ್ ಹಾಕಲು ಮುಂದಾಗಿದ್ದು ಇದು ವಿವಾದಕ್ಕೆ ಕಾರಣವಾಗಿದೆ.
ಈ ಕುರಿತಾಗಿ ಯಶ್ ತಾಯಿ ಮತ್ತು ಜಿಪಿಎ ಹೋಲ್ಡರ್ ದೇವರಾಜ್ ನಡುವೆ ಭಾರೀ ಜಗಳ ನಡೆದಿದ್ದು, ಹಾಸನದ ವಿದ್ಯಾನಗರದಲ್ಲಿರುವ ಯಶ್ ಮನೆಯ ಪಕ್ಕದಲ್ಲಿರುವ ಸೈಟ್ ವಿವಾದಕ್ಕೆ ಕಾರಣವಾಗಿದೆ. ಈ ಹಿಂದೆ ದೇವರಾಜ್, ಪುಷ್ಪಾ ಅರುಣ್‌ಕುಮಾರ್ ಹಾಕಿದ್ದ ಕಾಂಪೌಂಡ್ ತೆರವು ಮಾಡಿದ್ದರು. ಈಗ ಮತ್ತೆ ಕಾಂಪೌಂಡ್ ಹಾಕಲು ಪುಷ್ಪ ಅರುಣ್‌ಕುಮಾರ್ ಮುಂದಾಗಿದ್ದರು.



