Updated By: Priyalachhi
ಕಳೆದ 23 ರಂದು ನೆಡೆದ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕಾಂತಾ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಿಗಮದ ಕೇಂದ್ರ ಕಚೇರಿಯಲ್ಲಿ ‘ಪ್ರಗತಿ ಪರಿಶೀಲನಾ ಸಭೆ’ ನಡೆಯಿತು. ಈ ಸಭೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾದ ನಾಗರಾಜ್. ಎಂ ಸೇರಿದಂತೆ ನಿಗಮದ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು.
ನಿಗಮದ ವಿವಿಧ ಕೌಶಲ್ಯಾಭಿವೃದ್ಧಿ ಯೋಜನೆಗಳ ಪ್ರಸ್ತುತ ಸ್ಥಿತಿಗತಿ, ಕಾರ್ಯನಿರ್ವಹಣೆಯ ಪ್ರಗತಿ ಹಾಗೂ ಮುಂದಿನ ಗುರಿಗಳ ಕುರಿತು ಪಿಪಿಟಿ ಪ್ರೆಸೆಂಟೇಷನ್ ಮೂಲಕ ಸಮಗ್ರವಾಗಿ ಪರಿಶೀಲನೆ ನಡೆಸಲಾಯಿತು. ರಾಜ್ಯದ ಯುವಜನತೆಗೆ ಗುಣಮಟ್ಟದ ಕೌಶಲ್ಯ ತರಬೇತಿ ಹಾಗೂ ಉದ್ಯೋಗಾವಕಾಶಗಳ ವೃದ್ಧಿಗೆ ಪೂರಕವಾಗುವಂತೆ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.



