ಯಾದಗಿರಿ: ಕಾರು-VRL ಬಸ್​​ ಮುಖಾಮುಖಿ ಡಿಕ್ಕಿ; 7 ಮಂದಿ ಸ್ಥಳದಲ್ಲೇ ಸಾವು

0
16

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಯಾದಗಿರಿ: ಕಾರು ಮತ್ತು ವಿಆರ್ ಎಲ್ ಬಸ್​​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನ ದಾರುಣವಾಗಿ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವಾಪುರ ಬಳಿ ನಡೆದಿದೆ.ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಯಾದಗಿರಿಯಿಂದ ರಾಯಚೂರು ಕಡೆ ಹೊರಟಿದ್ದ ಕಾರು, ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ 7 ಜನ ಸಾವಿಗೀಡಾಗಿದ್ದಾರೆ.

ಅಪಘಾತದ ತೀವ್ರತೆಗೆ ವಾಹನ ನಡುರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡು ಹೊಗೆ ಆಕಾಶದೆತ್ತರಕ್ಕೆ ಚಾಚಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು.

ಅಪಘಾತದಲ್ಲಿ ಮೃತಪಟ್ಟವರನ್ನು ರಾಯಚೂರು ಜಿಲ್ಲೆ ಸಿರವಾರ ಪಟ್ಟಣದ ನಿವಾಸಿಗಳು ಎಂದು ಗುರುತಿಸಲಾಗಿದೆ. ಇಂದು ಅಮವಾಸ್ಯೆ ಹಿನ್ನೆಲೆ ತಿಂತನಿಮೌನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂದಿರುಗುತ್ತಿದ್ದ ವೇಳೆ ಅಪಘಾತ ನಡೆದಿದೆ.

ಕಾರಲ್ಲಿದ್ದ ಸರ್ಕಾರಿ ನೌಕರ ಶರಣಪ್ಪ, ಪುರಸಭೆ ಸದಸ್ಯ ಮಲ್ಲಿಕಾರ್ಜುನ್, ಮೂವರು ಮಹಿಳೆಯರು ಸೇರಿ 7 ಮಂದಿ ಮೃತಪಟ್ಟಿದ್ದಾರೆ.

sambrama prabha editor suresh kt

LEAVE A REPLY

Please enter your comment!
Please enter your name here