ರೈತರಿಗೆ ಸಿಗಬೇಕಾದ ಯೂರಿಯಾ ಕಾಳಸಂತೆಯಲ್ಲಿ ಮಾರಾಟ! ಅಕ್ರಮ ಯೂರಿಯಾ ದಾಸ್ತಾನು ಮೇಲೆ DRI ಅಧಿಕಾರಿಗಳ ತಂಡ ದಾಳಿ

0
22

Updated By: Priyalachhi

ಬೆಂಗಳೂರು : ರೈತರಿಗೆ ಸಬ್ಸಿಡಿ ದರದಲ್ಲಿ ನೀಡಲಾಗುತ್ತಿದ್ದ ಯೂರಿಯಾ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. 200 ರೂ. ಯೂರಿಯಾ 1,500 ರೂ.ಗೆ ಮಾರಾಟ ಮಾಡುತ್ತಿದ್ದ ಜಾಲವನ್ನು DRI (ಕಂದಾಯ ಗುಪ್ತಚರ ನಿರ್ದೇಶನಾಲಯ) ಅಧಿಕಾರಿಗಳ ತಂಡ ಪತ್ತೆ ಮಾಡಿದೆ. ಅಕ್ರಮವಾಗಿ ಸಂಗ್ರಹಿಸಿದ್ದ 19 ಟನ್ ಯೂರಿಯಾವನ್ನು ವಶಕ್ಕೆ ಪಡೆದಿದೆ.

ರಾಜ್ಯಕ್ಕೆ ವಿನಾಯಿತಿ ದರದಲ್ಲಿ ಕೇಂದ್ರ ಸರ್ಕಾರ ಕೊಡುತ್ತಿರುವ ಯೂರಿಯಾದ ಅಭಾವದಿಂದಾಗಿ ಈ ಬಾರಿ ರೈತರು ಪರದಾಟ ನಡೆಸಿದ ಸಾಕಷ್ಟು ಘಟನೆಗಳು ನಡೆದಿತ್ತು. ಕಿಲೋಮೀಟರ್​​ಗಟ್ಟಲೆ ಉದ್ದದ ಸರತಿ ಸಾಲಲ್ಲಿ ನಿಂತರೂ ಯೂರಿಯಾ ಸಿಗದೆ ಅದೆಷ್ಟೋ ಮಂದಿ ರೈತರು ಹಿಂದಿರುಗಿದ್ದರು. ಈ ನಡುವೆ ರೈತರಿಗೆ ಹಂಚಿಕೆಯಾಗಬೇಕಿದ್ದ ಯೂರಿಯಾ ಕಾಳಸಂತೆಯಲ್ಲಿ ಮಾರಾಟವಾಗಿರುವ ಆತಂಕಕಾರಿ ವಿಷಯ ಬಹಿರಂಗವಾಗಿದೆ.

ನೆಲಮಂಗಲ ಬಳಿಯ ಅಡಕಮಾರನಹಳ್ಳಿಯ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಯೂರಿಯಾ ದಾಸ್ತಾನು ಮೇಲೆ ಮಂಗಳವಾರ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳ ತಂಡ ದಾಳಿ ಮಾಡಿದೆ.

DRI team raid an illegal urea stockpile

ಕೇಂದ್ರವು 45 ಕೆಜಿ ತೂಕದ 2321 ರೂ. ಬೆಲೆಯ ಯೂರಿಯಾಗೆ 2054 ರೂ. ಸಬ್ಸಿಡಿ ನೀಡಿ 266 ರೂಪಾಯಿಗೆ ರಾಜ್ಯಕ್ಕೆ ನೀಡುತ್ತದೆ. ಅದನ್ನೇ ಇವರು ಕಾಳಸಂತೆಯಲ್ಲಿ 1500 ರೂ. ವರೆಗೆ ಮಾರಾಟ ಮಾಡುತ್ತಿದ್ದಾರೆ ಎಂದು ದಾಳಿ ವೇಳೆ ತಿಳಿದು ಬಂದಿದೆ.

ಕೇಂದ್ರ ಸರ್ಕಾರದಿಂದ ಯೂರಿಯಾ ರಾಜ್ಯದ ಕೃಷಿ ಇಲಾಖೆಗೆ ವರ್ಗಾವಣೆ ಆಗುತ್ತದೆ. ಆ ಬಳಿಕ ಇಲಾಖೆಯೇ ಜಿಲ್ಲೆಗಳ ನೋಂದಾಯಿತ ಡೀಲರ್ಸ್​ಗೆ ಸರಬರಾಜು ಮಾಡುತ್ತದೆ. ಡೀಲರ್ಸ್ ಮೂಲಕ ರೈತರಿಗೆ ರಸಗೊಬ್ಬರ ಸಿಗುತ್ತದೆ. ರೈತರಿಗೆ ಸಿಗಬೇಕಾದ ಯೂರಿಯಾ ದಂಧೆಕೊರರಿಗೆ ಸಿಕ್ಕಿದ್ದು ಹೇಗೆ ಎಂದು ಸ್ಥಳೀಯರು ಪ್ರಶ್ನೆ ಮಾಡಲಾಂಭಿಸಿದ್ದಾರೆ.

sambrama prabha editor suresh kt

LEAVE A REPLY

Please enter your comment!
Please enter your name here