ಸುಪ್ರೀಂ ಕೋರ್ಟ್ ಆದೇಶಾನುಸಾರ ಕಾಲಮಿತಿಯೊಳಗೆ ಗ್ರೇಟರ್​ ಬೆಂಗಳೂರು ಪ್ರಾಧಿಕಾರದ ಚುನಾವಣೆ

0
80

Updated By: Priyalachhi 

ಬೆಂಗಳೂರು: ”ಸುಪ್ರೀಂ ಕೋರ್ಟ್ ಆದೇಶದ ಅನುಸಾರ ನಿಗದಿತ ದಿನಾಂಕದ ಒಳಗೆ ಜಿಬಿಎ ಪಾಲಿಕೆಗಳ ಚುನಾವಣೆ ನಡೆಸಲಾಗುವುದು. ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ಅಗತ್ಯ ನಿರ್ದೇಶನ ನೀಡಲಾಗುವುದು” ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಜಿಬಿಎ ಪಾಲಿಕೆಗಳ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಗಡುವು ನೀಡಿರುವ ಬಗ್ಗೆ ಅರಮನೆ ಮೈದಾನ ಆವರಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ರಾಜ್ಯ ಚುನಾವಣಾ ಆಯೋಗವು ನ್ಯಾಯಾಲಯದ ಮುಂದೆ ಅಫಿಡವಿಟ್ ಸಲ್ಲಿಸಿದ್ದು, ಅದು ಅವರಿಗೆ ಬಿಟ್ಟ ವಿಚಾರ. ಸರ್ಕಾರ ಎಲ್ಲಾ ರೀತಿಯ ಆದೇಶ ನೀಡಲಿದೆ. ನಮಗೆ ಜಿಲ್ಲಾ ಹಾಗೂ ತಾಲೂಕು ಪಂಚಾಯತ್​ ಚುನಾವಣೆಗಳು ನಡೆಯಬೇಕು. ಸಂವಿಧಾನದ 73 ಹಾಗೂ 74ನೇ ತಿದ್ದುಪಡಿ ಅನುಸಾರ ಏನೆಲ್ಲಾ ತೀರ್ಮಾನ ಮಾಡಬೇಕೋ ಅದನ್ನು ಮಾಡಲಿದೆ ಎಂದು ತಿಳಿಸಿದರು.

ತಾಂತ್ರಿಕ ಆಕ್ಷೇಪಣೆಗಳ ಬಗ್ಗೆ ಪ್ರತಿಕ್ರಿಯಿಸಿ, ”ಕೆಲವರು ಆಕ್ಷೇಪಣೆ ಸಲ್ಲಿಸುತ್ತಾರೆ. ಅದಕ್ಕೆ ಸಮಿತಿ ರಚಿಸಲಾಗಿದ್ದು, ಅದು ತೀರ್ಮಾನ ಮಾಡಲಿದೆ. ರಾಜ್ಯ ಚುನಾವಣಾ ಆಯೋಗ ಚುನಾವಣೆ ನಡೆಸಲಿದ್ದು, ಅವರಿಗೆ ಏನು ನಿರ್ದೇಶನ ನೀಡಬೇಕೋ ನೀಡುತ್ತೇವೆ. ಮೀಸಲಾತಿ ವಿಚಾರವಾಗಿ ಮಹಿಳೆಯರಿಗೆ ಕಡಿಮೆಯಾಗಿದೆ ಎಂಬ ಮಾತುಗಳು ಕೇಳಿಬಂದಿವೆ. ಇದನ್ನು ನಾನು ಗಮನಿಸಿಲ್ಲ. ಇದನ್ನು ಪರಿಶೀಲಿಸಿ ತಪ್ಪಾಗಿದ್ದರೆ ಸರಿಪಡಿಸಲು ಅವರಿಗೆ ಸೂಚಿಸಲಾಗುವುದು. ನಾವು ಯಾವುದರಲ್ಲೂ ಹಸ್ತಕ್ಷೇಪ ಮಾಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.
sambrama prabha editor suresh kt

LEAVE A REPLY

Please enter your comment!
Please enter your name here