Updated By: Priyalachhi
ಮೈಸೂರು (ಅ.24): ಪವರ್ ಶೇರಿಂಗ್ ವಿಚಾರ ರಾಜ್ಯ ಕಾಂಗ್ರೆಸ್ನಲ್ಲಿ (Congress) ಕೋಲಾಹಲವನ್ನೇ ಸೃಷ್ಟಿಸಿದೆ. ಸಿದ್ದರಾಮಯ್ಯ (Siddaramaiag) ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣಗೊಳ್ತಿದ್ದಂತೆ ಅಧಿಕಾರ ಹಂಚಿಕೆ ವಿಚಾರ ಮುನ್ನಲೆಗೆ ಬಂದಿದ್ದು, ಸಿಎಂ ಸ್ಥಾನಕ್ಕೇರಲು ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಶತಪ್ರಯತ್ನ ಮಾಡ್ತಿದ್ದಾರೆ. ಇತ್ತ ಸಿದ್ದರಾಮಯ್ಯ 5 ವರ್ಷವೂ ನಾನೇ ಮುಖ್ಯಮಂತ್ರಿ ಅಂತಿದ್ದಾರೆ. ಇದರ ನಡುವೆ ಡಿಕೆಶಿ ಸಿಎಂ ಆಗಲಿ ಎನ್ನುವ ಕೂಗು ಕೂಡ ಹೆಚ್ಚಿದೆ. ಸಿದ್ದರಾಮಯ್ಯ ತವರಲ್ಲೇ ಡಿಕೆಶಿ ಮುಖ್ಯಮಂತ್ರಿಯಾಗಲಿ ಎಂದು ಬೆಂಬಲಿಗರು ವಿಶೇಷ ಪೂಜೆ ಸಲ್ಲಿಸಿದ್ದಾರೆ.
‘ಡಿಕೆ ಶಿವಕುಮಾರ್ ಸಿಎಂ ಆಗಲಿ’
ಸಿದ್ದರಾಮಯ್ಯ ತವರು ಕ್ಷೇತ್ರ ಮೈಸೂರಿನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲಿ ಎನ್ನುವ ಕೂಗು ಜೋರಾಗಿದೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಪೂಜೆ ಸಲ್ಲಿಸಿದ್ದಾರೆ.
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಪೂಜೆ
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಡಿಕೆ ಶಿವಕುಮಾರ್ ಬೆಂಬಲಿಗರು ವಿಶೇಷ ಪೂಜೆ ಸಲ್ಲಿದ್ದಾರೆ. ಡಿಸಿಎಂ ಡಿಕೆಶಿ ಸಿಎಂ ಆಗಲಿ ಎಂದು ಘೋಷಣೆ ಕೂಗಿದ್ದಾರೆ.



