1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಆರಂಭಿಸಲು ರಾಜ್ಯ ಸರ್ಕಾರ ಮುಂದು..!

0
24

Updated By: Priyalachhi

ಬೆಂಗಳೂರು: ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸಲು 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಹೇಳಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಜವಾಹರಲಾಲ್ ನೆಹರೂ ತಾರಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಗಗನಯಾತ್ರಿ ಶುಭಾಂಶು ಶುಕ್ಲಾ ಅವರೊಂದಿಗೆ ವಿದ್ಯಾರ್ಥಿ ಸಂವಾದ’ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.

ಪ್ರಸ್ತುತ ಯುಗವು ಕೃತಕ ಬುದ್ಧಿಮತ್ತೆ (ಎಐ) ಮತ್ತು ಕಂಪ್ಯೂಟರ್‌ಗಳ ಯುಗವಾಗಿದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸರ್ಕಾರಿ ಶಾಲಾ ಮಕ್ಕಳು ಹಿಂದೆ ಉಳಿಯಬಾರದು. ಆದ್ದರಿಂದ ಸರ್ಕಾರವು 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಆರಂಭಿಸುವ ನಿರ್ಧಾರಕ್ಕೆ ಬಂದಿದೆ ಎಂದು ಹೇಳಿದರು.

900 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಕ 11 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡಲು ಸಿದ್ಧತೆ ನಡೆಸಿದ್ದೇವೆ. ಶುಭಾಂಶು ಶುಕ್ಲಾ ಅವರಂತಹ ಸಾಧಕರ ಕನಸುಗಳನ್ನು ನಮ್ಮ ಮಕ್ಕಳು ಮುಂದುವರಿಸಬೇಕಾದರೆ, ಅವರಿಗೆ ಬಾಲ್ಯದಿಂದಲೇ ಭದ್ರ ಬುನಾದಿ ಹಾಕುವುದು ನನ್ನ ಕರ್ತವ್ಯ ಎಂದು ತಿಳಿಸಿದರು.

sambrama prabha editor suresh kt

LEAVE A REPLY

Please enter your comment!
Please enter your name here