ಮುಂದೆ ಆಯಾ ವರ್ಷವೇ ‘ಏಕಲವ್ಯ ಪ್ರಶಸ್ತಿ’ ನೀಡುವುದಾಗಿ ಘೋಷಣೆ

0
39

Updated By: Priyalachhi

ಬೆಂಗಳೂರು: 2022 ಮತ್ತು 2023ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾ ರತ್ನ ಹಾಗೂ 2023ರ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗಳನ್ನು 48 ಮಂದಿ ಕ್ರೀಡಾಪಡುಗಳಿಗೆ ಪ್ರದಾನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕ್ರೀಡಾಪಡುಗಳನ್ನು ಸೋಮವಾರ ಸನ್ಮಾನಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿದ್ದ 2022 ಮತ್ತು 2023ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಹಾಗೂ 2023ರ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಮಾತನಾಡಿದ್ದು, ಈ ವೇಳೆ ಇನ್ನು ಮುಂದೆ ಆಯಾ ವರ್ಷವೇ ಏಕಲವ್ಯ ಪ್ರಶಸ್ತಿಗಳನ್ನು ನೀಡುವುದಾಗಿ ಘೋಷಣೆ ಮಾಡಿದರು.

ಎರಡು ಸಾಲಿನ ಏಕಲವ್ಯ ಪ್ರಶಸ್ತಿಗಳನ್ನು ಒಟ್ಟು 30 ಜನರಿಗೆ ನೀಡಲಾಗಿದ್ದು,4 ಲಕ್ಷಗಳ ನಗದು ಬಹುಮಾನವನ್ನು ಪ್ರಶಸ್ತಿ ಒಳಗೊಂಡಿದೆ. ನಗದು ಬಹುಮಾನದ ಮೊತ್ತವನ್ನು ನನ್ನ ಅವಧಿಯಲ್ಲಿಯೇ ಹೆಚ್ಚಿಸಲಾಗಿದೆ. ಮುಂದಿನ ವರ್ಷದಿಂದ ಆಯಾ ವರ್ಷದ ಪ್ರಶಸ್ತಿಗಳನ್ನು ಆಯಾ ವರ್ಷವೇ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆಂದು ಹೇಳಿದರು.

ಉತ್ತಮ ಕ್ರೀಡಾಪಟುಗಳನ್ನು ರಾಜ್ಯಕ್ಕೆ ನೀಡುವ ತರಬೇತುದಾರರಿಗೆ ಒಟ್ಟು 9 ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುತ್ತಿದ್ದು, 3 ಲಕ್ಷ ರೂ.ಗಳ ನಗದು ಬಹುಮಾನವನ್ನು ಒಳಗೊಂಡಿದೆ. ಗ್ರಾಮೀಣ ಮತ್ತು ಪಾರಂಪರಿಕ ಕ್ರೀಡೆಗಳ ಸಾಧಕರನ್ನು ಗುರುತಿಸಿ ಒಟ್ಟು 15 ಕ್ರೀಡಾರತ್ನ ಪ್ರಶಸ್ತಿಗಳನ್ನು ನೀಡಲಾಗಿದ್ದು, 2 ಲಕ್ಷ ರೂ.ಗಳ ನಗದು ಬಹುಮಾನವನ್ನು ಒಳಗೊಂಡಿದೆ. ರಾಜ್ಯದ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ ಖಾಸಗಿ ಕ್ಷೇತ್ರದ ಸಂಸ್ಥೆಗಳನ್ನು ಗೌರವಿಸಲು ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ತಿಳಿಸಿದರು.

ಕ್ರೀಡೆಗಳ ಅಭಿವೃದ್ಧಿ ಹಾಗೂ ಕ್ರೀಡಾಪಟುಗಳ ಪ್ರೋತ್ಸಾಹಕ್ಕಾಗಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಒಲಂಪಿಕ್ಸ್ ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನ ಪದಕ ವಿಜೇತರಿಗೆ 6 ಕೋಟಿ ರೂ. ನಗದು ಬಹುಮಾನ, ಶ್ರೇಣಿ1 ಅಥವಾ 2 ರಲ್ಲಿ ಸರ್ಕಾರಿ ಉದ್ಯೋಗ, ಬೆಳ್ಳಿ ಪದಕ ವಿಜೇತರಿಗೆ 4 ಕೋಟಿ ರೂ., ಕಂಚು ಪದಕ ವಿಜೇತರಿಗೆ 3 ಕೋಟಿ ರೂ.ನಗದು ಬಹುಮಾನ ನೀಡಲಾಗುತ್ತಿದೆ. ಉತ್ತಮ ಸಾಧನೆ ಮಾಡುವ ಕ್ರೀಡಾಪಟುಗಳಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಪ್ರೋತ್ಸಾಹ ನೀಡಲಿದೆ ಎಂದರು.

sambrama prabha editor suresh kt

LEAVE A REPLY

Please enter your comment!
Please enter your name here