ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ: ಸಚಿವ ಕೆ. ಎಚ್. ಮುನಿಯಪ್ಪ

0
29

Updated By: Priyalachhi

ಬೆಳಗಾವಿ: ವಿಧಾನಸಭೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಪ್ರಶ್ನೆಗೆ ಉತ್ತರಿಸಿದ ಮುನಿಯಪ್ಪ ಅವರು, ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್​​ದಾರರ ಆದಾಯವನ್ನು 1.20ಲಕ್ಷ ರೂ.ಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ 500 ರೂ. ದೊರೆಯುತ್ತದೆ. ಇದರ ಆಧಾರದಲ್ಲಿ ಅವರ ಆದಾಯವೂ ವರ್ಷಕ್ಕೆ 1.80 ಲಕ್ಷ ರೂ. ಗಿಂತ ಅಧಿಕವಾಗುತ್ತಿದೆ. ಹೀಗಾಗಿ ಆದಾಯ ಮಿತಿ ಪರಿಷ್ಕರಣೆ ಕುರಿತು ಚಿಂತನೆ ನಡೆದಿದೆ ಎಂದರು.

ಕೇಂದ್ರ ಸರ್ಕಾರ, ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಿದೆ. ರಾಜ್ಯದಲ್ಲಿ 4.53 ಲಕ್ಷ ಬಿಪಿಎಲ್ ಹಾಗೂ 1.25 ಲಕ್ಷ ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿವೆ. ಇಲ್ಲಿನ ಜನಸಂಖ್ಯೆಗೆ ಹೊಲಿಸಿದರೆ ಶೇ.73ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡ್​ ಪಡೆದಿವೆ. ರಾಜ್ಯವು ಜಿಎಸ್ಟಿ , ಆದಾಯ ತೆರಿಗೆ ಪಾವತಿಯಲ್ಲಿ ದೇಶದಲ್ಲಿ ಮುಂಚೂಣಿಯಲ್ಲಿದೆ. ಈ ಅಂಶ ಪರಿಗಣಿಸಿದರೆ ಬಿಪಿಎಲ್ ಕುಟುಂಬಗಳ ಪ್ರಮಾಣ ಶೇ.50ರಷ್ಟು ಇರಬೇಕಿತ್ತು. ಆದರೆ ಅದಕ್ಕೂ ಹೆಚ್ಚಿನ ಕುಟುಂಬ ಬಿಪಿಎಲ್ ಕಾರ್ಡ್​​ ಪಡೆದುಕೊಂಡಿವೆ ಎಂದು ಅವರು ತಿಳಿಸಿದ್ದಾರೆ.

sambrama prabha editor suresh kt

LEAVE A REPLY

Please enter your comment!
Please enter your name here