ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ; ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ

0
90

Updated By: Priyalachhi

ಮೈಸೂರು : ತಮ್ಮ ಆಪ್ತ ಸಹಾಯಕನ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ನಡೆಸಿರುವ ದಾಳಿಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.

ಅಕ್ರಮ ಆಸ್ತಿ ಗಳಿಕೆ ಆರೋಪದಡಿ ತಮ್ಮ ಆಪ್ತ ಕಾರ್ಯದರ್ಶಿಯಾದ ಸರ್ದಾರ್ ಸರ್ಫರಾಜ್ ಖಾನ್‌ಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಸಚಿವ ಜಮೀರ್ ಅಹ್ಮದ್ ಖಾನ್​, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಸರ್ಫರಾಜ್‌ ಖಾನ್ ಅವರ ತಂದೆಯ ಕಾಲದಿಂದಲೂ ಶ್ರೀಮಂತರು. ಈ ದಾಳಿ ಯಾಕೆ ಆಗಿದೆ ಎಂಬುದು ಗೊತ್ತಿಲ್ಲ. ಏನಾಗಿದೆ ಎಂಬುದನ್ನು ನೋಡೋಣ ಎಂದು ತಿಳಿಸಿದರು.

ಸಹಕಾರ ನಿರ್ದೇಶನಾಲಯ ಇಲಾಖೆಯಿಂದ ವಸತಿ ಇಲಾಖೆಗೆ ನಿಯೋಜನೆಯಲ್ಲಿರುವ ಸರ್ದಾರ್ ಸರ್ಫರಾಜ್ ಖಾನ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನೆಲೆ ದಾಳಿ ನಡೆಸಲಾಗಿದೆ. ಸರ್ದಾರ್ ಸರ್ಫರಾಜ್ ಖಾನ್‌ಗೆ ಸಂಬಂಧಿಸಿದ ಬೆಂಗಳೂರಿನ ಹಲಸೂರು ಮತ್ತಿತರ ಕಡೆಗಳಲ್ಲಿರುವ ಮನೆಗಳು, ಕೊಡಗಿನಲ್ಲಿರುವ ಕಾಫಿ ಎಸ್ಟೇಟ್, ಹೆಚ್.ಡಿ. ಕೋಟೆಯಲ್ಲಿರುವ ರೆಸಾರ್ಟ್ ಸೇರಿದಂತೆ 5ಕ್ಕೂ ಅಧಿಕ ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದ್ದು, ಶೋಧಕಾರ್ಯ ಕೂಡ ಮುಂದುವರೆಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಕೂಡ ಮಾಹಿತಿ ನೀಡಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿ ಪ್ರವಾಸ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್, ಡಿಸಿಎಂ ತಮ್ಮ ಇಲಾಖೆಯ ವಿಚಾರಕ್ಕೆ ದೆಹಲಿ ಹೋಗಿದ್ದಾರೆ. ಅವರು ಹೈಕಮಾಂಡ್ ಭೇಟಿ‌ ಮಾಡುತ್ತಿಲ್ಲ ಎಂದರು.

ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಕೊಡಬೇಕೆಂದು ಅವರ ಆಪ್ತ ಹಾಗೂ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಪುನರುಚ್ಚರಿಸಿದ್ದು, ಈ ಹೇಳಿಕೆ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಎಲ್ಲರೂ ಅವರವರ ಅಭಿಪ್ರಾಯ ಹೇಳುತ್ತಾರೆ. ನನ್ನ ಅಭಿಪ್ರಾಯ ನಾನು ಹೇಳಿದ್ದೇನೆ. ಸಿದ್ದರಾಮಯ್ಯ ಈಗ ಸಿಎಂ ಕುರ್ಚಿ ಮೇಲೆ ಕೂತಿದ್ದಾರೆ. 2028ರ ವರೆಗೆ ಅವರೇ ಸಿಎಂ ಅಗಿರುತ್ತಾರೆ. ಇದು ನನ್ನ ಅಭಿಪ್ರಾಯ. ಆದರೆ, ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅದಕ್ಕೆ ನಾವು ಬದ್ಧ. ಆದರೆ ಸದ್ಯಕ್ಕೆ ಸಿಎಂ ಬದಲಾವಣೆ ಸನ್ನಿವೇಶ ಇಲ್ಲ ಎಂದು ಸ್ಪಷ್ಟಪಡಿಸಿದರು.

sambrama prabha editor suresh kt

LEAVE A REPLY

Please enter your comment!
Please enter your name here