ಅಸ್ಸಾಂನಲ್ಲಿ ಬೆಳ್ಳಂಬೆಳಗ್ಗೆ 5.1 ತೀವ್ರತೆ ಕಂಪಿಸಿದ ಭೂಮಿ

0
35

Updated By: Priyalachhi 

ಗುವಾಹಟಿ(ಅಸ್ಸಾಂ): ಅಸ್ಸಾಂನ ಮಧ್ಯ ಭಾಗದ ಪ್ರದೇಶಗಳಲ್ಲಿ ಇಂದು (ಸೋಮವಾರ) ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆಯ ಭೂಕಂಪ ಸಂಭವಿಸಿದೆ. ಯಾರಿಗೂ ಯಾವುದೇ ಗಾಯ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ.

ಬ್ರಹ್ಮಪುತ್ರ ನದಿಯ ದಕ್ಷಿಣ ದಂಡೆಯಲ್ಲಿರುವ ಮೋರಿಗಾಂವ್ ಜಿಲ್ಲೆಯಲ್ಲಿ ಬೆಳಿಗ್ಗೆ 4.17ಕ್ಕೆ 50 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿತು ಎಂದು

ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ. ಭೂಕಂಪದ ಕೇಂದ್ರಬಿಂದು ಮಧ್ಯ ಅಸ್ಸಾಂನಲ್ಲಿ 26.37 ಉತ್ತರ ಅಕ್ಷಾಂಶ ಮತ್ತು 92.29 ಪೂರ್ವ ರೇಖಾಂಶದಲ್ಲಿದೆ ಎಂದು ಕೇಂದ್ರ ತಿಳಿಸಿದೆ.

ಮೋರಿಗಾಂವ್ ಜಿಲ್ಲೆಯ ನೆರೆಯ ಕಾಮ್ರೂಪ್ ಮೆಟ್ರೋಪಾಲಿಟನ್, ನಾಗಾಂವ್, ಪೂರ್ವ ಕರ್ಬಿ ಆಂಗ್ಲಾಂಗ್, ಪಶ್ಚಿಮ ಕರ್ಬಿ ಆಂಗ್ಲಾಂಗ್, ಹೊಜೈ, ದಿಮಾ ಹಸಾವೊ, ಗೋಲಾಘಾಟ್, ಜೋರ್ಹತ್, ಶಿವಸಾಗರ್, ಚರೈಡಿಯೊ, ಕ್ಯಾಚಾರ್, ಕರೀಮ್‌ಗಂಜ್, ಹೈಲಕಂಡಿ, ಧುಬ್ರಿ, ದಕ್ಷಿಣ ಸಲ್ಮಾರಾ-ಮಂಕಚಾರ್ ಮತ್ತು ಗೋಲ್‌ಪಾರಾ ಜಿಲ್ಲೆಗಳಲ್ಲಿ ಜನರಿಗೆ ಭೂ ಕಂಪಿಸಿದ ಅನುಭವವಾಗಿದೆ.

ದರ್ರಾಂಗ್, ತಮುಲ್‌ಪುರ್, ಸೋನಿತ್‌ಪುರ್, ಕಮ್ರೂಪ್, ಬಿಸ್ವನಾಥ್, ಉದಲ್‌ಗುರಿ, ನಲ್ಬರಿ, ಬಜಾಲಿ, ಬರ್ಪೇಟಾ, ಬಕ್ಸಾ, ಚಿರಾಂಗ್, ಕೊಕ್ರಜಾರ್, ಬೊಂಗೈಗಾಂವ್ ಮತ್ತು ಬ್ರಹ್ಮಪುತ್ರದ ಉತ್ತರ ದಂಡೆಯಲ್ಲಿರುವ ಲಖಿಂಪುರದಲ್ಲೂ ಭೂಮಿ ಕಂಪಿಸಿದೆ.

sambrama prabha editor suresh kt

LEAVE A REPLY

Please enter your comment!
Please enter your name here