ಸಿಎಂ ಭೇಟಿ ಮಾಡಿದ ದುನಿಯಾ ವಿಜಯ್

0
9

Updated By: Priyalachhi

ಬೆಂಗಳೂರು: “ಲ್ಯಾಂಡ್ ಲಾರ್ಡ್” ನಾಯಕ ದುನಿಯಾ ವಿಜಯ್ ಅವರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ತಮ್ಮ ಸಿನಿಮಾ ನೋಡುವುದಕ್ಕೆ ಆಹ್ವಾನ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, “ಲ್ಯಾಂಡ್ ಲಾರ್ಡ್” ಚಿತ್ರತಂಡದವರು ಇಂದು ನನ್ನನ್ನು ಭೇಟಿಯಾಗಿ, ತಮ್ಮ ಚಿತ್ರ ವೀಕ್ಷಣೆಗೆ ಆಗಮಿಸುವಂತೆ ಪ್ರೀತಿಯಿಂದ ಆಹ್ವಾನಿಸಿದರು ಎಂದು ತಿಳಿಸಿದ್ದಾರೆ.

ಈ ಚಿತ್ರದ ಮೂಲಕ ಸಮಾಜದಲ್ಲಿನ‌ ಜಾತಿ ಅಸಮಾನತೆ ಮತ್ತು ಸಾಂವಿಧಾನಿಕ ಮೌಲ್ಯಗಳ ಮೇಲೆ ಬೆಳಕು ಚೆಲ್ಲುವಂತಹ ಪ್ರಯತ್ನವನ್ನು ಚಿತ್ರತಂಡ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಕಳಕಳಿಯ ಕಥಾಹಂದರದ ಸಿನಿಮಾಗಳು ಮೂಡಿಬರುತ್ತಿರುವುದು ಅಪರೂಪ. ನಿಜಕ್ಕೂ ಇದೊಂದು ದಿಟ್ಟ ಪ್ರಯತ್ನ, ಇದಕ್ಕಾಗಿ ಇಡೀ ಚಿತ್ರತಂಡಕ್ಕೆ ಅಭಿನಂದಿಸುತ್ತೇನೆ.

ದುನಿಯಾ ವಿಜಯ್ ನಾಯಕ ನಟನಾಗಿ ಅಭಿನಯಿಸಿರುವ “ಲ್ಯಾಂಡ್ ಲಾರ್ಡ್” ಸಿನಿಮಾ ಶತದಿನೋತ್ಸವವನ್ನು ಪೂರೈಸಲಿ, ಇಂತಹ ಇನ್ನಷ್ಟು ಚಿತ್ರಗಳು ಮೂಡಿಬರಲು ಈ ಸಿನಿಮಾ ಸ್ಪೂರ್ತಿಯಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

sambrama prabha editor suresh kt

LEAVE A REPLY

Please enter your comment!
Please enter your name here