ಶೇ.33 ಮಹಿಳಾ ಮೀಸಲಾತಿ: ಚುನಾವಣೆ ವೇಳೆ ನಾರಿಯರಿಂದ ಕಾಂಗ್ರೆಸ್’ಗೆ ತಕ್ಕ ಪಾಠ ನಿಶ್ಚಿತ; BJP

0
18

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿಯನ್ನು ಬಲಿಕೊಟ್ಟ ಕಾಂಗ್ರೆಸ್ ನಾಯಕರಿಗೆ ಮುಂಬರುವ ದಿನಗಳಲ್ಲಿ ದೇಶದಾದ್ಯಂತ ನಾರಿಯರು ತಕ್ಕ ಪಾಠ ಕಲಿಸುವುದು ನಿಶ್ಚಿತ ಎಂದು ಬಿಜೆಪಿ ಶನಿವಾರ ಹೇಳಿದೆ.

ಶೇ. 33 ಮಹಿಳಾ ಮೀಸಲಾತಿ ಮಸೂದೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿದ್ದು, ಕಾಂಗ್ರೆಸ್ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯವ್ಯಾಪಿ ಪ್ರತಿಭಟನೆ ಆರಂಭಿಸಿದೆ.

ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ನಾಯಕರು, ಮಹಿಳೆಯರ ಹಕ್ಕುಗಳನ್ನು ಕಾಂಗ್ರೆಸ್ ಕಡೆಗಣಿಸಿದೆ ಎಂದು ಆರೋಪಿಸಿದ್ದಾರೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಶೇ.33ರಷ್ಟು ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಅಡ್ಡಿಪಡಿಸುವ ಮೂಲಕ ಕೋಟ್ಯಾಂತರ ಮಹಿಳೆಯರಿಗೆ ದ್ರೋಹ ಮಾಡಿದೆ ಎಂದು ಹೇಳಿದರು.

ಮಹಿಳೆಯರ ಶಕ್ತಿಯನ್ನು ಲೆಕ್ಕಿಸದ ಕಾಂಗ್ರೆಸ್‌ಗೆ ಜನರು ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ಸರ್ಕಾರ ಮಹಿಳೆಯರನ್ನು ಕೇವಲ ಮನೆ ಕೆಲಸಗಳಿಗೆ ಸೀಮಿತಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, ಮಹಿಳೆಯರಿಗೆ ರಾಜಕೀಯ ಪ್ರತಿನಿಧಿತ್ವ ನೀಡುವ ಮನೋಭಾವ ಕಾಂಗ್ರೆಸ್‌ಗೆ ಇಲ್ಲ ಎಂದು ಟೀಕಿಸಿದರು. “ಮಹಿಳೆಯರು ಮನೆಯಲ್ಲೇ ಇರಬೇಕು ಎಂಬ ಮನಸ್ಥಿತಿ ಕಾಂಗ್ರೆಸ್‌ದ್ದಾಗಿದೆ” ಎಂದು ಕಿಡಿಕಾರಿದರು.

sambrama prabha editor suresh kt

LEAVE A REPLY

Please enter your comment!
Please enter your name here