ಟ್ರಂಪ್ G20 ಶೃಂಗಸಭೆಗೆ ‘ವಿಶ್ವಗುರು’ ಖಂಡಿತಾ ಹೋಗುತ್ತಾರೆ : ಮೋದಿ ವಿರುದ್ಧ ಕಾಂಗ್ರೆಸ್ ವ್ಯಂಗ್ಯ ಟೀಕೆ

0
50

Updated By: Priyalachhi

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶೃಂಗಸಭೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿರುವುದರಿಂದ ಪ್ರಧಾನಿ ಮೋದಿಯವರು ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನಿ ಮೋದಿಯವರನ್ನು ವ್ಯಂಗ್ಯವಾಗಿ ಟೀಕಿಸಿದೆ.

ಎಕ್ಸ್ ಪೋಸ್ಟ್‌ನಲ್ಲಿ, ಎಐಸಿಸಿ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ನವೆಂಬರ್ 22-23 ರಂದು ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿರುವುದರಿಂದ, ಸ್ವಯಂ ಘೋಷಿತ ವಿಶ್ವಗುರು ಸ್ವತಃ ಖುದ್ದಾಗಿ ಭಾಗವಹಿಸುತ್ತಾರೆ ಎಂದು ನಾವು ಖಚಿತವಾಗಿ ಹೇಳಬಹುದು ಎಂದು ಹಾಸ್ಯಭರತ ಧಾಟಿಯಲ್ಲಿ ಬರೆದುಕೊಂಡಿದ್ದಾರೆ.

“ಕಭಿ ನ ಕಬಿ, ಕಹಿ ನ ಕಹಿ…” ಎಂದು ಕೂಡ ಬರೆದುಕೊಂಡಿದ್ದಾರೆ.

ಕಳೆದ ತಿಂಗಳು ಕೌಲಾಲಂಪುರದಲ್ಲಿ ನಡೆದ ಆಸಿಯಾನ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಅವರು ಟ್ರಂಪ್ ಅವರನ್ನು ಭೇಟಿಯಾಗುವುದನ್ನು ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿತ್ತು. ಪ್ರಧಾನಿ ಅಂದು ವರ್ಚುವಲ್ ಮೂಲಕ ಶೃಂಗಸಭೆಯಲ್ಲಿ ಭಾಗಿಯಾಗಿದ್ದರು.

sambrama prabha editor suresh kt

LEAVE A REPLY

Please enter your comment!
Please enter your name here