Updated By: Priyalachhi
ಬೆಳಗಾವಿ: ಮಾಜಿ ಸಚಿವ ದಿ.ಉಮೇಶ ಕತ್ತಿ ಬಳಿಕ ಮತ್ತೊಬ್ಬ ಬೆಳಗಾವಿ ಜಿಲ್ಲೆಯ ಶಾಸಕರಿಂದ ಪ್ರತ್ಯೇಕ ಉತ್ತರ ಕರ್ನಾಟಕ ಕೂಗು ಕೇಳಿ ಬಂದಿದೆ. ಪ್ರತ್ಯೇಕ ಉತ್ತರ ಕರ್ನಾಟಕಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, ಪ್ರಾದೇಶಿಕ ಅಸಮಾನತೆ ವಿರುದ್ಧ ಹಿರಿಯ ರಾಜಕಾರಣಿ, ಕಾಗವಾಡ ಶಾಸಕ ರಾಜು ಕಾಗೆ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಅಭಿವೃದ್ಧಿ ವಿಚಾರದಲ್ಲಿ ದಕ್ಷಿಣ ಕರ್ನಾಟಕ ಹೋಲಿಸಿದರೆ ಉತ್ತರ ಕರ್ನಾಟಕ ಹಿಂದುಳಿದಿದೆ. ದಕ್ಷಿಣಕ್ಕೆ ತೋರಿಸುವ ವಿಶೇಷ ಕಾಳಜಿ ಉತ್ತರಕ್ಕೆ ಯಾಕಿಲ್ಲ?. ಎಲ್ಲರೂ ಕನ್ನಡನಾಡಿನ ಮಕ್ಕಳೇ, ಆದರೂ ಯಾಕೆ ಮಲತಾಯಿ ಧೋರಣೆ?. ತಾರತಮ್ಯ ಹೋಗಲಾಡಿಸಿ, ಇಲ್ಲವೇ ಪ್ರತ್ಯೇಕ ಉತ್ತರ ಕರ್ನಾಟಕ ರಚನೆ ಮಾಡುವಂತೆ ಈ ಭಾಗದ ಕೆಲ ಹೋರಾಟಗಾರರು ಆಗ್ರಹಿಸುತ್ತಿದ್ದಾರೆ.



