ಯುವಕನ ಲಾಡ್ಜ್​ಗೆ ಕರೆದೊಯ್ದು 58 ಗ್ರಾಂ ಚಿನ್ನಾಭರಣ ದೋಚಿದ ಯುವತಿ

0
47

Updated By: Priyalachhi

ಬೆಂಗಳೂರು: ಡೇಟಿಂಗ್ ಆ್ಯಪ್ ಮುಖಾಂತರ ಪರಿಚಯವಾದ ಯುವಕನನ್ನು ಯುವತಿಯೊಬ್ಬಳು ಲಾಡ್ಜ್​ಗೆ ಕರೆದೊಯ್ದು ಪ್ರಜ್ಞೆ ತಪ್ಪಿಸಿ ಆತನ ಬಳಿ ಇದ್ದ 58 ಗ್ರಾಂ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳುನಾಡಿನ ಅವಿನಾಶ್ ಕುಮಾರ್ ವಂಚನೆಗೊಳಗಾದವ. ಈತ ನೀಡಿದ ದೂರಿನ ಮೇರೆಗೆ ಕವಿಪ್ರಿಯಾ ಎಂಬಾಕೆಯ ವಿರುದ್ಧ ಕಳ್ಳತನ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಶೋಧಕಾರ್ಯ ನಡೆಸುತ್ತಿದ್ದಾರೆ.

ಪೀಣ್ಯದ ನಾಗಸಂದ್ರದ ಪಿಜಿ(ಪೇಯಿಂಗ್ ಗೆಸ್ಟ್)ಯೊಂದರಲ್ಲಿ ವಾಸವಾಗಿದ್ದ ಅವಿನಾಶ್, ನಗರದ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಎರಡು ತಿಂಗಳ ಹಿಂದೆ ಹ್ಯಾಪನ್ ಆ್ಯಪ್ ಹೆಸರಿನ ಡೇಟಿಂಗ್ ಆ್ಯಪ್​ನಲ್ಲಿ ಯುವಕನನ್ನು ಆರೋಪಿತೆ ಪರಿಚಯಿಸಿಕೊಂಡಿದ್ದಳು. ಇಬ್ಬರು ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡು ಪೋನ್​ನಲ್ಲಿ ಮಾತನಾಡುತ್ತಿದ್ದರು. ಮಾತುಕತೆಯಂತೆ ನ.1ರಂದು ಇಂದಿರಾನಗರದ ರೆಸ್ಟೋರೆಂಟ್​ವೊಂದರಲ್ಲಿ ಇಬ್ಬರೂ ಭೇಟಿಯಾಗಿ ಮದ್ಯ ಪಾರ್ಟಿ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ಧಾರೆ.

ಮದ್ಯ ಸೇವಿಸಿಯದ ಬಳಿಕ ನಾನು ಪಿಜಿಗೆ ಹೋಗಲು ಸಾಧ್ಯವಿಲ್ಲ ಎಂದೆದೆ. ಹೀಗಾಗಿ ಯುವತಿ ಲಾಡ್ಜ್​ವೊಂದರಲ್ಲಿ ರೂಮ್ ಬುಕ್ ಮಾಡಿದಳು. ಆನ್‌ಲೈನ್​ನಲ್ಲಿ ಆರ್ಡರ್ ಮಾಡಿದ್ದ ಊಟವನ್ನು ಇಬ್ಬರು ಕುಳಿತುಕೊಂಡು ಸೇವಿಸಿದೆವು. ಬಳಿಕ ಯುವತಿ ಕುಡಿಯಲು ನೀರು ಕೊಟ್ಟಳು. ಸೇವಿಸಿದ ಬಳಿಕ ನನಗೆ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿತು. ಬೆಳಗ್ಗೆದ್ದು ನೋಡಿದಾಗ ಚಿನ್ನದ ಸರ, ಚಿನ್ನದ ಕೈಬಳೆ, 10 ಸಾವಿರ ನಗದು ಸೇರಿದಂತೆ ಒಟ್ಟು 6.80 ಲಕ್ಷ ರೂ ಮೌಲ್ಯದ 58 ಗ್ರಾಂ ಚಿನ್ನಾಭರಣ ಇರಲಿಲ್ಲ. ಯುವತಿ ಎಲ್ಲವನ್ನೂ ದೋಚಿ ಪರಾರಿಯಾಗಿದ್ದಾಳೆ ಎಂದು ಅವಿನಾಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

sambrama prabha editor suresh kt

LEAVE A REPLY

Please enter your comment!
Please enter your name here