‘ಅವರ ಆತ್ಮ ನಮ್ಮೊಂದಿಗಿದೆ’ ಸಾಲುಮರದ ತಿಮ್ಮಕ್ಕನ ಬಗ್ಗೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಭಾವುಕ ಪೋಸ್ಟ್

0
60

Updated By: Priyalachhi

ಕರುನಾಡಿನ ಪ್ರೀತಿಯ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ಮರಗಳನ್ನೇ ಮಕ್ಕಳಾಗಿ ಕಂಡ ಹಿರಿಯ ಜೀವ ಪರಿಪೂರ್ಣ ಜೀವನ ನಡೆಸಿ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ (Salumarada Timmakka) ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಅವರಿಗೆ 114 ವರ್ಷ ವಯಸ್ಸಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಸಾಲು ಮರದ ತಿಮ್ಮಕ್ಕ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ

ಕನ್ನಡ ನಾಡಿನ ಹೆಮ್ಮೆಯ ಸಾಲು ಮರದ ತಿಮ್ಮಕ್ಕ ಬಗ್ಗೆ ಟಾಲಿವುಡ್​ನ ಖ್ಯಾತ ನಟ, ಆಂಧ್ರ ಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ತಮ್ಮ ಪೋಸ್ಟ್ ಮೂಲಕ ವೃಕ್ಷಮಾತೆಗೆ ಅವರು ಭಾವಪೂರ್ಣ ವಿದಾಯ ಹೇಳಿದ್ದಾರೆ.
sambrama prabha editor suresh kt

LEAVE A REPLY

Please enter your comment!
Please enter your name here