Updated By: Priyalachhi
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇಂದು ತಂಡವನ್ನು ಪ್ರಕಟಿಸಿದೆ. ಗಾಯದ ಕಾರಣ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ನಾಯಕ ಶುಭಮನ್ ಗಿಲ್ ಅವರನ್ನು ಏಕದಿನ ತಂಡದಿಂದ ಕೈಬಿಡಲಾಗಿದ್ದು, ಕೆ.ಎಲ್.ರಾಹುಲ್ಗೆ ನಾಯಕನ ಜವಾಬ್ದಾರಿ ನೀಡಲಾಗಿದೆ.
ರಿಷಭ್ ಪಂತ್ ಮತ್ತು ರುತುರಾಜ್ ಗಾಯಕ್ವಾಡ್ ಅವರೂ ತಂಡ ಸೇರಿದ್ದಾರೆ. ವೇಗದ ಬೌಲರ್ಗಳಾದ ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ ಮತ್ತು ಅರ್ಷದೀಪ್ ಸಿಂಗ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಭಾರತದ ಏಕದಿನ ತಂಡ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ಕೆ.ಎಲ್.ರಾಹುಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.
ಎಲ್ಲಿ, ಯಾವಾಗ ಪಂದ್ಯ?:
ಮೊದಲ ಏಕದಿನ ಪಂದ್ಯ: ಭಾನುವಾರ, ನವೆಂಬರ್ 30 (ರಾಂಚಿ)
ಎರಡನೇ ಏಕದಿನ ಪಂದ್ಯ: ಬುಧವಾರ, ಡಿಸೆಂಬರ್ 3 (ರಾಯ್‌ಪುರ)
ಮೂರನೇ ಏಕದಿನ ಪಂದ್ಯ: ಶನಿವಾರ, ಡಿಸೆಂಬರ್ 6 (ವಿಶಾಖಪಟ್ಟಣಂ)



