Updated By: Priyalachhi
IND vs SA 1st Test: ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಇಂದಿನಿಂದ ಪ್ರಾರಂಭವಾಗಲಿದೆ. ಮೊದಲ ಪಂದ್ಯಕ್ಕೆ ಕೋಲ್ಕತ್ತಾದ ಈಡೆನ್ ಗಾರ್ಡನ್ಸ್ ಆತಿಥ್ಯ ವಹಿಸಿಕೊಂಡಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್ ಮತ್ತೊಮ್ಮೆ ಟಾಸ್ ಸೋಲನ್ನು ಕಂಡಿದ್ದಾರೆ. ದಕ್ಷಿಣ ಆಫ್ರಿಕಾ ನಾಯಕ ಟೆಂಬಾ ಬಾವುಮಾ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಭಾರತಕ್ಕೆ ಬೌಲಿಂಗ್ಗೆ ಆಹ್ವಾನಿಸಿದ್ದಾರೆ.
ಅಂತಿಮ ತಂಡಗಳು – ಭಾರತ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ವಾಷಿಂಗ್ಟನ್ ಸುಂದರ್, ಶುಭಮನ್ ಗಿಲ್(ನಾಯಕ), ರಿಷಭ್ ಪಂತ್(ವಿ.ಕೀ), ರವೀಂದ್ರ ಜಡೇಜಾ, ಧ್ರುವ್ ಜುರೆಲ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ದಕ್ಷಿಣ ಆಫ್ರಿಕಾ: ಐಡೆನ್ ಮಾರ್ಕ್ರಾಮ್, ರಿಯಾನ್ ರಿಕೆಲ್ಟನ್, ವಿಯಾನ್ ಮುಲ್ಡರ್, ಟೆಂಬಾ ಬಾವುಮಾ(ನಾಯಕ), ಟೋನಿ ಡಿ ಝೋರ್ಜಿ, ಟ್ರಿಸ್ಟಾನ್ ಸ್ಟಬ್ಸ್, ಕೈಲ್ ವೆರ್ರಿನ್ನೆ(ವಿ.ಕೀ) ಸೈಮನ್ ಹಾರ್ಮರ್, ಮಾರ್ಕೊ ಜಾನ್ಸೆನ್, ಕಾರ್ಬಿನ್ ಬಾಷ್, ಕೇಶವ್ ಮಹಾರಾಜ್.



