ಇಂದು IND vs SA ವಿಶ್ವಕಪ್​ ಫೈನಲ್​ ಕದನ

0
13

Updated By: Priyalachhi

ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2025ರ ಫೈನಲ್ ಪಂದ್ಯ ಭಾನುವಾರ ನಡೆಯಲಿದ್ದು ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿ ಆಗುತ್ತಿವೆ. ಉಭಯ ತಂಡಗಳ ನಡುವಿನ ಫೈನಲ್​ ಸಮರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತವು ಸೆಮಿಫೈನಲ್ನಲ್ಲಿ 7 ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾವನ್ನು ಮಣಿಸಿ ಫೈನಲ್​ಗೆ ತಲುಪಿದರೆ, ದಕ್ಷಿಣ ಆಫ್ರಿಕಾ ಇಂಗ್ಲೆಂಡ್ ಅನ್ನು ಸೋಣಿಸಿ ಅಂತಿಮ ಸುತ್ತಿಗೆ ತಲುಪಿದೆ. ಇಂದು ಯಾರೇ ಗೆದ್ದರು ಮಹಿಳಾ ಏಕದಿನ ವಿಶ್ವಕಪ್​ನಲ್ಲಿ ಹೊಸ ವಿಜೇತ ತಂಡವಾಗಲಿದೆ.

2005 ಮತ್ತು 2017ರ ನಂತರ ಭಾರತ ತಂಡ ಮೂರನೇ ಬಾರಿಗೆ ಇದದೀಗ ಏಕದಿನ ವಿಶ್ವಕಪ್ ಫೈನಲ್‌ಗೆ ತಲುಪಿದೆ. ಭಾರತ ತಂಡವನ್ನು ತವರು ನೆಲದಲ್ಲಿ ಪ್ರಶಸ್ತಿ ಗೆಲ್ಲುವ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ. ಈ ವಿಶ್ವಕಪ್‌ನಲ್ಲಿ ಭಾರತ ತಂಡ ಏಳು ಪಂದ್ಯಗಳಲ್ಲಿ ಮೂರನ್ನು ಗೆಲ್ಲುವ ಮೂಲಕ ಸೆಮಿಫೈನಲ್ ತಲುಪಿತು. ಸೆಮಿಫೈನಲ್ ಪಂದ್ಯದಲ್ಲಿ, ಟೀಮ್ ಇಂಡಿಯಾ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಐದು ವಿಕೆಟ್‌ಗಳಿಂದ ಮಣಿಸಿತು.

ಏತನ್ಮಧ್ಯೆ, ದಕ್ಷಿಣ ಆಫ್ರಿಕಾ ತಂಡ ಏಳು ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಗೆಲ್ಲುವ ಮೂಲಕ ಸೆಮಿಫೈನಲ್ ತಲುಪಿತು. ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 125 ರನ್‌ಗಳಿಂದ ಗೆಲ್ಲುವ ಮೂಲಕ ಪ್ರಶಸ್ತಿ ಸುತ್ತಿಗೆ ಮುನ್ನಡೆಯಿತು.

ಈ ಪಂದ್ಯದಲ್ಲಿ ಭಾರತ ತಂಡ ಸ್ಮೃತಿ ಮಂಧಾನ, ಜೆಮಿಮಾ ರೊಡ್ರಿಗಸ್ ಮತ್ತು ಹರ್ಮನ್‌ಪ್ರೀತ್ ಕೌರ್ ಅವರಿಂದ ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದೆ. ದೀಪ್ತಿ ಶರ್ಮಾ ಮತ್ತು ಶ್ರೀ ಚರಣಿ ತಮ್ಮ ಬೌಲಿಂಗ್ ಕೌಶಲ್ಯವನ್ನು ಮತ್ತೊಮ್ಮೆ ಪ್ರದರ್ಶಿಸಬಹುದು. ಮತ್ತೊಂದೆಡೆ, ದಕ್ಷಿಣ ಆಫ್ರಿಕಾ ತಂಡವು ನಾಯಕಿ ಲಾರಾ ವೋಲ್ವಾರ್ಡ್ ಮತ್ತು ತಾಜ್ಮಿನ್ ಬ್ರಿಟ್ಸ್ ಅವರಿಂದ ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದೆ. ಮರಿಜಾನ್ನೆ ಕಪ್ ಮತ್ತು ನೊನ್ಕುಲುಲೆಕೊ ಮ್ಲಾಬಾ ಸಹ ಉತ್ತಮ ಫಾರ್ಮ್​ನಲ್ಲಿದ್ದಾರೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ಹೆಡ್ಟುಹೆಡ್ ದಾಖಲೆ

1997 ರಿಂದ ಭಾರತ ಮತ್ತು ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವೆ ಒಟ್ಟು 34 ಏಕದಿನ ಪಂದ್ಯಗಳು ನಡೆದಿದ್ದು, ಇದರಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಭಾರತ 20 ಪಂದ್ಯಗಳನ್ನು ಗೆದ್ದರೆ, ದಕ್ಷಿಣ ಆಫ್ರಿಕಾ 13 ಪಂದ್ಯಗಳನ್ನು ಮಾತ್ರ ಗೆದ್ದಿದೆ. ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ.

ವಿಶ್ವಕಪ್ ದಾಖಲೆ: ODI ವಿಶ್ವಕಪ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾದ ಮಹಿಳಾ ತಂಡಗಳ ನಡುವಿನ ಮುಖಾಮುಖಿ ದಾಖಲೆಯು ನೋಡಿದರೇ ಎರಡೂ ತಂಡಗಳು ಆರು ಬಾರಿ ಎದುರುಬದುರಾಗಿವೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ಎರಡೂ ತಲಾ ಮೂರು ಪಂದ್ಯಗಳನ್ನು ಗೆದ್ದಿವೆ. ಈ ಬಾರಿಯ ವಿಶ್ವಕಪ್‌ನ ಲೀಗ್ ಹಂತದಲ್ಲಿ ಎರಡೂ ತಂಡಗಳು ಮುಖಾಮುಖಿಯಾದಾಗ, ಆಫ್ರಿಕನ್ ತಂಡವು ಮೂರು ವಿಕೆಟ್‌ಗಳಿಂದ ರೋಚಕ ಗೆಲುವು ಸಾಧಿಸಿತ್ತು.

ತಂಡಗಳುಭಾರತ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಹರ್ಲೀನ್ ಡಿಯೋಲ್, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್, ರೇಣುಕಾ ಸಿಂಗ್ ಠಾಕೂರ್, ದೀಪ್ತಿ ಶರ್ಮಾ, ಸ್ನೇಹ ರಾಣಾ, ಕ್ರಾಂತಿ ಗೌಡ್, ಶ್ರೀ ಚರಣಿ, ರಾಧಾ ಯಾದವ್, ಅಮಂಜೋತ್ ಕೌರ್, ಶಫಾಲಿ ವರ್ಮಾ, ಅರುಂಧತಿ ರೆಡ್ಡಿ.

ದಕ್ಷಿಣ ಆಫ್ರಿಕಾ ತಂಡ: ಲಾರಾ ವೊಲ್ವಾರ್ಡ್ಟ್ (ನಾಯಕ), ಅಯಬಂಗಾ ಖಾಕಾ, ಕ್ಲೋಯ್ ಟ್ರಯಾನ್, ನಡಿನ್ ಡಿ ಕ್ಲರ್ಕ್, ಮರಿಜಾನ್ನೆ ಕಪ್, ತಾಜ್ಮಿನ್ ಬ್ರಿಟ್ಸ್, ಸಿನಾಲೊ ಜಫ್ತಾ (ವಿಕೆಟ್ ಕೀಪರ್), ನಾನ್‌ಕುಲುಲೆಕೊ ಮ್ಲಾಬಾ, ಆನ್ನೆ ಡೆರ್ಕ್‌ಸೆನ್, ಆನ್ನೆ ಬಾಷ್, ಮಸಾಬತ್ ಕ್ಲಾಸ್, ತುಮಿ ಸೆಖುಖುನೆ, ನೊಂದುಮಿಸೊ ಶಂಗಾಸೆ, ಕರಾಬೊ ಮೆಸೊ.

sambrama prabha editor suresh kt

LEAVE A REPLY

Please enter your comment!
Please enter your name here