ಮನುವಾದಿಗಳಿಂದಲೇ ಸಂವಿಧಾನಕ್ಕೆ ವಿರೋಧ; ಸಿದ್ದರಾಮಯ್ಯ

0
34

Updated By: Priyalachhi

ಬೆಂಗಳೂರು: ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ. ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ “ಸಂವಿಧಾನ ದಿನಾಚರಣೆ – 2025” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು. ಮನುಸ್ಮೃತಿಯಲ್ಲಿದ್ದ ಮನುಷ್ಯ ವಿರೋಧಿ, ಸಮಾನತೆ ವಿರೋಧಿ ನಿಯಮಗಳಿಗೆ ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಅವಕಾಶ ಇಲ್ಲದಂತಾಯಿತು. ಅದಕ್ಕೇ ಮನುವಾದಿಗಳು ನಮ್ಮ ಸಂವಿಧಾನವನ್ನು ವಿರೋಧಿಸುತ್ತಾರೆ ಎಂದರು.

ಸಮಸಮಾಜ ನಿರ್ಮಾಣ, ಅಸಮಾನತೆ ನಿವಾರಣೆ ನಮ್ಮ ಸಂವಿಧಾನ ಮತ್ತು ಅಂಬೇಡ್ಕರ್ ಅವರ ಆಶಯವಾಗಿತ್ತು. We the people of INDIA ಎನ್ನುವುದೇ ನಮ್ಮ ಸಂವಿಧಾನದ ಮೂಲ ಮಂತ್ರ. ಈ ದೇಶದ ಜನತೆಗೆ ಎಂಥಾ ಸಂವಿಧಾನ ಬೇಕು ಎನ್ನುವ ಬಗ್ಗೆ ಒಂದು ವರ್ಷ ಕಾಲ ಸಂವಿಧಾನ ಸಭೆಯಲ್ಲಿ ಸಮಗ್ರ ಚರ್ಚೆ ಬಳಿಕ ಅಂಗೀಕರಿಸಲಾಗಿದೆ.

ಫೆಡರಲ್, ಯೂನಿಟರಿ, ರಿಟರ್ನ್, ಅನ್ ರಿಟರ್ನ್ ಸಂವಿಧಾನಗಳು ವಿಶ್ವದಲ್ಲಿವೆ. ನಮ್ಮದು ರಿಟರ್ನ್ (ಲಿಖಿತ) ಸಂವಿಧಾನ. ನಮ್ಮ ದೇಶದಲ್ಲಿರುವಷ್ಟು ಜಾತಿ, ಧರ್ಮಗಳು ಬೇರೆ ಯಾವ ದೇಶದಲ್ಲೂ ಇಲ್ಲ. ಹೀಗಾಗಿ ಈ ನೆಲಕ್ಕೆ ಒಪ್ಪಿಗೆಯಾಗುವ ಸಂವಿಧಾನವನ್ನು ಅಂಬೇಡ್ಕರ್ ಕೊಟ್ಟರು.

sambrama prabha editor suresh kt

LEAVE A REPLY

Please enter your comment!
Please enter your name here