SSLCಯಲ್ಲಿ ತೃತೀಯ ಭಾಷೆಗೆ ಅಂಕದ ಬದಲಾಗಿ ಗ್ರೇಡ್​​ ಪ್ರಶ್ನಿಸಿ PIL: ಅರ್ಜಿದಾರರಿಗೆ ದಂಡ ವಿಧಿಸಿದ ಹೈಕೋರ್ಟ್

0
5

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಎಸ್​​ಎಸ್​​ಎಲ್​​ಸಿ ತೃತೀಯ ಭಾಷೆ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​​ ನೀಡುವ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್​​ಗೆ ಹೆಚ್.ಎನ್. ಚಂದನಾ ಮತ್ತು ಎಸ್.ವೆಂಕಟೇಶ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಪರೀಕ್ಷೆಯ ಕೊನೆಯ ಹಂತದಲ್ಲಿ ಸರ್ಕಾರದ ತೆಗೆದುಕೊಂಡಿರುವ ಈ ನಿರ್ಧಾರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಆರೋಪಿಸಲಾಗಿತ್ತು. ಆದರೆ ಅರ್ಜಿದಾರರಿಗೆ ಹೈಕೋರ್ಟ್​​ ದಂಡ ವಿಧಿಸಿದೆ.

ಅರ್ಜಿದಾರರಿಗೆ 1 ಲಕ್ಷ ದಂಡ

ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಪಿಐಎಲ್​ ಸಲ್ಲಿಕೆ ಮಾಡಿರುವವರು, ಸರ್ಕಾರದ ಆದೇಶದ ವಿವರ ಒದಗಿಸದೇ ಕೇವಲ ಪತ್ರಿಕೆ ವರದಿ ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಹಿನ್ನೆಲೆ ಅರ್ಜಿದಾರರಾದ ಹೆಚ್.ಎನ್.ಚಂದನಾ ಮತ್ತು ಎಸ್.ವೆಂಕಟೇಶ್​​ಗೆ 1 ಲಕ್ಷ ರೂಪಾಯಿ ದಂಡ ವಿಧಿಸಿರುವ ಹೈಕೋರ್ಟ್​​, ಪಿಐಎಲ್ ವಜಾಗೊಳಿಸಿ ಆದೇಶಿಸಿದೆ.

SSLC ತೃತೀಯ ಭಾಷೆಗಳ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕನ್ನಡಪರ ಸಂಘಟನೆಗಳು ಸ್ವಾಗತಿಸಿದ್ದರೂ, ಬಿಜೆಪಿಯ ಕೆಲವು ನಾಯಕರು ಸೇರಿ ಹಲವರಿಂದ ವಿರೋಧ ವ್ಯಕ್ತವಾಗಿತ್ತು. ಈ ವಿಚಾರವಾಗಿ ಸ್ವತಃ ಮಧ್ಯಪ್ರವೇಶ ಮಾಡಿದ್ದ ರಾಜ್ಯಪಾಲರು, ಸರ್ಕಾರದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಗೆ ಪತ್ರ ಬರೆದಿದ್ದರು.

sambrama prabha editor suresh kt

LEAVE A REPLY

Please enter your comment!
Please enter your name here