Updated By: Priyalachhi
ಬೆಂಗಳೂರು: ಮನರೇಗಾ ಹಾಗೂ ವಿಬಿ ಜಿ ರಾಮ್ ಜಿ ಹೋರಾಟವನ್ನು ತೀವ್ರಗೊಳಿಸಲು ಕೈ ಪಡೆ ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಇಂದು ಮಂಗಳವಾರ ರಾಜಭವನ ಚಲೋ ಹಮ್ಮಿಕೊಂಡಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿದಂತೆ ರಾಷ್ಟ್ರೀಯ ನಾಯಕರು ಈ ಹೋರಾಟಕ್ಕೆ ಸಾಥ್ ನೀಡಿದ್ದಾರೆ.
ರಾಜ್ ಭವನ ಚಲೋ ಪ್ರತಿಭಟನೆಯ ಭಾಗವಾಗಿ ಲೋಕ ಭವನದ ಕಡೆಗೆ ಮೆರವಣಿಗೆ ನಡೆಸಲು ನಿರ್ಧರಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಪಕ್ಷದ ಶಾಸಕರು ಮತ್ತು ಸಂಸದರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದರು.
MGNREGA ಬದಲಾಗಿ VB-G RAM G ತರುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಪ್ರತಿಭಟನೆ ನಡೆಯಿತು.
ಕೇಂದ್ರ ಸರ್ಕಾರವು ಗ್ರಾಮೀಣ ಉದ್ಯೋಗ ಖಾತರಿ ಚೌಕಟ್ಟನ್ನು ಕಿತ್ತುಹಾಕುತ್ತಿದೆ. ಪಂಚಾಯತ್‌ಗಳ ಹಕ್ಕುಗಳನ್ನು ಮೊಟಕುಗೊಳಿಸುತ್ತಿದೆ ಎಂದು ಆರೋಪಿಸಿ ಲೋಕ ಭವನದ ಕಡೆಗೆ ತೆರಳಲು ಯತ್ನಿಸಿದ ಕಾಂಗ್ರೆಸ್ ನಾಯಕರನ್ನು ಪೊಲೀಸರು ತಡೆದರು.
ಭಾಷಣ ಮಾಡಿದ ನಂತರ ನಾಯಕರು ಸ್ಥಳದ ಹೊರಗೆ ಪೊಲೀಸರು ನಿಯೋಜಿಸಿದ್ದ ಬಸ್ ಹತ್ತಿ ಬಂಧನಕ್ಕೆ ಒಳಗಾದರು.



