Updated By: Priyalachhi
ಕಲಬುರಗಿ: ರಾಜ್ಯದಲ್ಲಿ ಸಿಎಂ ಕುರ್ಚಿ ಕದನ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಯಾವುದೇ ಗೊಂದಲ ಸೃಷ್ಟಿ ಮಾಡಿಲ್ಲ. ಇದು ಸ್ಥಳೀಯ ಮಟ್ಟದಲ್ಲೇ ಇದ್ದು, ಸ್ಥಳೀಯ ನಾಯಕರೇ ಇದನ್ನ ಬಗೆಹರಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಸ್ಪಷ್ಟಪಡಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, “ಹೈಕಮಾಂಡ್ ಯಾವುದೇ ಗೊಂದಲವನ್ನು ಸೃಷ್ಟಿಸಿಲ್ಲ. ಅದು ಸ್ಥಳೀಯ ಮಟ್ಟದಲ್ಲೇ ಇದೆ” ಎಂದರು.
ನಾಯಕತ್ವ ಬದಲಾವಣೆ ಗೊಂದಲದ ಬಗ್ಗೆ “ಹೈಕಮಾಂಡ್ ಮೇಲೆ ಆರೋಪ ಹೊರಿಸುವುದು ಎಷ್ಟು ಸರಿ?”. ಹೈಕಮಾಂಡ್ ಅನ್ನು ದೂಷಿಸುವ ಬದಲು ಸ್ಥಳೀಯ ನಾಯಕರು ಆಂತರಿಕ ಗೊಂದಲವನ್ನು ಸರಿಪಡಿಸಿಕೊಳ್ಳಬೇಕು ಎಂದು ಖರ್ಗೆ ತಾಕೀತು ಮಾಡಿದ್ದಾರೆ.



