Updated By: Priyalachhi
ಬೆಂಗಳೂರು: ನಮ್ಮ ಪಕ್ಷದ ನಾಯಕರ ಜತೆಗಿನ ಮಾತುಕತೆ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ನಾನು ಕೆಪಿಸಿಸಿ ಅಧ್ಯಕ್ಷ, ರಾಹುಲ್ ಗಾಂಧಿ ಅವರು ಲೋಕಸಭೆ ವಿರೋಧ ಪಕ್ಷದ ನಾಯಕ. ಶಿಷ್ಟಾಚಾರದ ಪ್ರಕಾರ ಅವರನ್ನು ನಾನು ಸ್ವಾಗತಿಸಿ, ಭೇಟಿ ಮಾಡಿದ ವಿಚಾರವನ್ನು ಸಾರ್ವಜನಿಕವಾಗಿ ಚರ್ಚೆ ಮಾಡಲು ಸಾಧ್ಯವೇ? ನೀವುಗಳು ನಿಮಗೆ ಇಚ್ಛೆ ಬಂದಂತೆ ಗೊಂದಲ ಸೃಷ್ಟಿಸಿಕೊಳ್ಳುತ್ತಿದ್ದೀರಿ.
ಅವರಿವರ ಮಾತು ಕೇಳಿ ನಿಮ್ಮ ಚಾನೆಲ್ ಗಳು ಹೊಂದಿರುವ ಗೌರವ ಕಳೆದುಕೊಳ್ಳುತ್ತಿದ್ದೀರಿ , ನಾವು ಯಾವ ಸಂದೇಶವನ್ನು ಕೊಟ್ಟಿಲ್ಲ. ನಮಗೂ ಯಾವ ಸಂದೇಶವನ್ನೂ ಕೊಟ್ಟಿಲ್ಲ. ಚೆನ್ನಾಗಿ ಕೆಲಸ ಮಾಡುತ್ತಿದ್ದೀರಿ, ಇದನ್ನೇ ಮುಂದುವರಿಸಿಕೊಂಡು ಹೋಗಿ ಎಂದು ನಮ್ಮ ನಾಯಕರು ಹೇಳಿದ್ದಾರೆ ಎಂದು ಸ್ಪಷ್ಟ ಪಡಿಸಿದರು.



