ವಿಧಾನಮಂಡಲ ಅಧಿವೇಶನ 2 ದಿನ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

0
19

Updated By: Priyalachhi

ಬೆಂಗಳೂರು: ಮನ್ರೇಗಾ ಯೋಜನೆ ಬಗ್ಗೆ ಚರ್ಚೆ ಮಾಡಲು ಹಾಗೂ ನಿರ್ಣಯ ಅಂಗೀಕರಿಸುವ ಸಲುವಾಗಿ ವಿಧಾನಮಂಡಲ ಅಧಿವೇಶನವನ್ನ 2 ದಿನ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆಯಲ್ಲಿ ತಿಳಿಸಿದ್ದಾರೆ.

ಬುಧವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ಸರಕಾರ ಮನರೇಗಾ ಕಾಯ್ದೆ ಬದಲಾಗಿ ಜಾರಿಗೆ ತಂದಿರುವ ವಿಬಿ: ಜಿ‌ ರಾಮ್ ಜಿ ಕಾಯ್ದೆಯ ಕುರಿತು ವಿವರಣೆ ನೀಡಿದ ಸಿದ್ದರಾಮಯ್ಯ, ಈ ಕಾಯ್ದೆ ಕುರಿತು ಸಮಗ್ರ ಚರ್ಚೆ ನಡೆಸಲು ಅಧಿವೇಶನವನ್ನು ಎರಡು ದಿನ ವಿಸ್ತರಣೆ ಮಾಡಲು ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಶಾಸಕರು ಈ ಕಾಯ್ದೆ ಕುರಿತಾದ ಚರ್ಚೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ನರೇಗಾ ವಿಷಯಕ್ಕಾಗಿಯೇ ವಿಶೇಷ ಅಧಿವೇಶನ ಕರೆಯಲಾಗಿದೆ. ಆದರೆ, ಚರ್ಚೆಗೆ ಅವಕಾಶ ಸಿಕ್ಕಿಲ್ಲ. ಹೀಗಾಗಿ ಸೋಮವಾರ ಮಂಗಳವಾರ ನರೇಗಾ ಚರ್ಚೆಗಾಗಿಯೇ ಅಧಿವೇಶನ ವಿಸ್ತರಿಸೋಣ. ಸದನ ಕಾರ್ಯಕಲಾಪ ಸಲಹಾ ಸಮಿತಿ ಸಭೆಯಲ್ಲಿ ಇದರ ಬಗ್ಗೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಅಲ್ಲದೆ, ವಿಧಾನಪರಿಷತ್ ಸದಸ್ಯರು, ವಿಧಾನಸಭೆ ಸದಸ್ಯರು ಉಭಯ ಸದನಗಳಲ್ಲಿ ಕಡ್ಡಾಯವಾಗಿ ನರೇಗಾ ಚರ್ಚೆಯಲ್ಲಿ ಭಾಗವಹಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

sambrama prabha editor suresh kt

LEAVE A REPLY

Please enter your comment!
Please enter your name here